ನವದೆಹಲಿ, ಫೆ 12 (DaijiworldNews/SK): ನವದೆಹಲಿ, ಫೆ 12 (DaijiworldNews/SK): ಕತಾರ್ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಭಾರತೀಯ ನೌಕಾಪಡೆಯ 8 ಮಾಜಿ ಯೋಧರನ್ನು ದೋಹಾ ಸೋಮವಾರ ಬಿಡುಗಡೆ ಮಾಡಿದ್ದು, ಇದೀಗ ಈ ವಿಚಾರವಾಗಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅಭಿನಂದನೆ ಸಲ್ಲಿಸಿದ ಅನುರಾಗ್ ಠಾಕೂರ್ ಅವರು, “ಪ್ರಧಾನಿ ಮೋದಿ ಅವರಿಗೆ ಧನ್ಯವಾದಗಳು, ಮೋದಿ ಹೈ ತೋ ಮುಮ್ಕಿನ್ ಹೈ. 45 ದಿನಗಳ ಹಿಂದೆ ಮರಣದಂಡನೆಗೆ ಗುರಿಯಾಗಿದ್ದ ಯೋಧರ ಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಇಳಿಸಲಾಯಿತು. ಈಗ, ನಮ್ಮ ನೌಕಾಪಡೆಯ ಯೋಧರನ್ನು ಮನೆಗೆ ಕರೆತರುವ ಮೂಲಕ, ಮೋದಿ ಸರ್ಕಾರವು ಪ್ರತಿ ಜೀವವೂ ಮುಖ್ಯವಾಗಿದೆ ಎಂದು ಸಾಬೀತು ಪಡಿಸಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ.
ಇನ್ನು ಈ ಬಗ್ಗೆ ಅಧಿಕೃತ ಹೇಳಿಕೆಯ ಮೂಲಕ ತಿಳಿಸಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯ, ಕತಾರ್ನಲ್ಲಿ ಬಂಧಿತರಾಗಿರುವ ದಹ್ರಾ ಗ್ಲೋಬಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಎಂಟು ಭಾರತೀಯ ಪ್ರಜೆಗಳ ಬಿಡುಗಡೆಯನ್ನು ಭಾರತ ಸರ್ಕಾರ ಸ್ವಾಗತಿಸುತ್ತದೆ.
ಈಗಾಗಲೇ ಎಂಟು ನಿವೃತ್ತ ನೌಕಾ ಅಧಿಕಾರಿಗಳಲ್ಲಿ ಏಳು ಮಂದಿ ಭಾರತಕ್ಕೆ ಮರಳಿದ್ದಾರೆ. ಈ ಪ್ರಜೆಗಳ ಬಿಡುಗಡೆ ಮತ್ತು ಮನೆಗೆ ಬರಲು ಅನುವು ಮಾಡಿಕೊಡಲು ಕತಾರ್ ರಾಜ್ಯದ ಅಮೀರ್ ಅವರ ನಿರ್ಧಾರವನ್ನು ನಾವು ಪ್ರಶಂಸಿಸುತ್ತೇವೆ ಎಂದು ತಿಳಿಸಿದೆ.