ಲಕ್ನೋ, ಫೆ 14 (DaijiworldNews/HR): ಜ್ಞಾನವಾಪಿ ಆವರಣಕ್ಕೆ ಭೇಟಿ ನೀಡಿದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪೂಜೆ ಸಲ್ಲಿಸಿದ್ದಾರೆ.
ವಾರಣಾಸಿಯ ನ್ಯಾಯಾಲಯವು ಹಿಂದೂ ಭಕ್ತರಿಗೆ ಜ್ಞಾನವಾಪಿ ಮಸೀದಿಯ ಮೊಹರು ಮಾಡಿದ ನೆಲಮಾಳಿಗೆಯಲ್ಲಿ ಪೂಜೆ ಮಾಡಲು ಅನುಮತಿ ನೀಡಿದ ಕೆಲವು ದಿನಗಳ ನಂತರ ಈ ಬೆಳವಣಿಗೆ ನಡೆದಿದೆ.
ಇನ್ನು ಯೋಗಿ ಆದಿತ್ಯನಾಥ್ ಅವರು ‘ವ್ಯಾಸ್ ತೆಹಕಾನಾ’ದಲ್ಲಿ ಸ್ಥಾಪಿಸಲಾದ ಶಿಲ್ಪಗಳನ್ನು ವೀಕ್ಷಿಸಿ ಬಳಿಕ ಅಲ್ಲಿರುವ ನಂದಿಯನ್ನು ಅರ್ಚಕರ ಸಮ್ಮುಖದಲ್ಲಿ ಪೂಜೆ ಸಲ್ಲಿಸಿದ್ದಾರೆ.