ಬೆಂಗಳೂರು, ಫೆ 14 (DaijiworldNews/HR): ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ (ಹೆಚ್ಎಸ್ಆರ್ಪಿ) ನಂಬರ್ ಪ್ಲೇಟ್ ಅಳವಡಿಸುವ ಅವಧಿಯನ್ನು ಮೂರು ತಿಂಗಳು ವಿಸ್ತರಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಅವರು, ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸುವ ಗಡುವನ್ನು ಮೂರು ತಿಂಗಳು ವಿಸ್ತರಿಸಲಾಗುತ್ತದೆ. ಫೇಕ್ ವೆಬ್ ಸೈಟ್ ಬಗ್ಗೆ ಎಚ್ಚರ ವಹಿಸಲಾಗುತ್ತದೆ. ಈ ಯೋಜನೆ ಪಾರದರ್ಶಕವಾಗಿದೆ ಎಂದು ತಿಳಿಸಿದ್ದಾರೆ.
ಇನ್ನು ಈ ಹೆಚ್ಎಸ್ಆರ್ಪಿ ಅಲ್ಯುಮಿನಿಯಂ ಲೋಹದಿಂದ ತಯಾರಿಸಲಾಗುತ್ತದೆ. ಈಗಾಗಲೇ ಹೊಸ ವಾಹನಗಳಲ್ಲಿ ಈ ರೀತಿಯ ನಂಬರ್ ಪ್ಲೇಟ್ ಕಡ್ಡಾಯವಾಗಿ ಅಳವಡಿಸಲಾಗುತ್ತಿದೆ. ಈ ಪ್ಲೇಟ್ಗಳಲ್ಲಿ ನಂಬರ್ಗಳು ಉಬ್ಬಿಕೊಂಡಿರುವ ರೀತಿ ಅಚ್ಚಾಗಿರುತ್ತದೆ.