ದೆಹಲಿ, ಫೆ 14 (DaijiworldNews/PC): ಕಾಂಗ್ರೆಸ್ನ ಪ್ರಾಥಮಿಕ ಸದಸ್ಯತ್ವಕ್ಕೆ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಮೊಮ್ಮಗ ವಿಭಾಕರ್ ಶಾಸ್ತ್ರಿ ಅವರು ರಾಜೀನಾಮೆಯನ್ನು ನೀಡಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆಯನ್ನು ನೀಡಿದ ವಿಭಾಕರ್ ಶಾಸ್ತ್ರಿ ಅವರು ರಾಜಿನಾಮೆಯನ್ನು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಲ್ಲಿಸಿದ್ದಾರೆ.
ಕಾಂಗ್ರೆಸ್ ರಾಜೀನಾಮೆ ನೀಡಿದ ವಿಭಾಕರ್ ಶಾಸ್ತ್ರಿ ಯವರು ಬಿಜೆಪಿಗೆ ಸೇರಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್ನಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡಿದ ಅವರು, "ನಾನು ಈ ಮೂಲಕ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆ” ಎಂದು ಬರೆದುಕೊಂಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ನಾನು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ‘ಜೈ ಜವಾನ್, ಜೈ ಕಿಸಾನ್’ ದೃಷ್ಟಿಕೋನವನ್ನು ಇನ್ನಷ್ಟು ಬಲಪಡಿಸುವ ಮೂಲಕ ದೇಶಕ್ಕೆ ಸೇವೆ ಸಲ್ಲಿಸಲು ಸಾಧ್ಯವಾಗುತ್ತದೆ ಆದ್ದರಿಂದ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದೇನೆ ಎಂದು ಹೇಳಿದ್ದಾರೆ.