ಚಿಕ್ಕಬಳ್ಳಾಪುರ, ,ಫೆ 14 (DaijiworldNews/ AK):ಭಾರತ ಮತ್ತು ಪಾಕಿಸ್ತಾನ ಇಬ್ಭಾಗವಾಗಲು ಹಿಂದೂ ಮಹಾಸಭಾ ಕಾರಣ ಎಂದು ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಎಂ. ವೀರಪ್ಪ ಮೊಯ್ಲಿ ಆರೋಪಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂ ಮಹಾಸಭಾ ಭಾರತವನ್ನು ಇಬ್ಭಾಗ ಮಾಡಲು ಹೇಳಿತ್ತು. ಆ ನಂತರ ನೆಹರೂ ಬಗ್ಗೆ ಅಪಪ್ರಚಾರ ಮಾಡಿತು. ಹಿಂದೂ ಮಹಾಸಭಾದವರೇ ಭಾರತದಿಂದ ಪಾಕಿಸ್ತಾನದಿಂದ ಇಬ್ಭಾಗ ಮಾಡಲು ಹೇಳಿದ್ದರು. ದೇಶ ಹಿಬ್ಭಾಗ ಮಾಡಿ ನಂತರ ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರೂ ಬಗ್ಗೆ ಅಪಪ್ರಚಾರ ಮಾಡಿತ್ತುಎಂದು ಗಂಭೀರ ಆರೋಪ ಮಾಡಿದ್ದಾರೆ.
ಈ ಹಿಂದೆ ಅಯೋಧ್ಯೆ ರಾಮಮಂದಿರ ಉದ್ಘಾಟಿಸುವ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು 11 ದಿನ ಉಪವಾಸ ಮಾಡಿದ್ದರೇ? ಎಂದು ಅನುಮಾನ ವ್ಯಕ್ತಪಡಿಸಿದ ವೀರಪ್ಪ ಮೊಯ್ಲಿ ಇದೀಗ ಹೊಸ ವಿವಾದತ್ಮಕ ಹೇಳಿಕೆ ನೀಡಿದ್ದಾರೆ.