ಹಾವೇರಿ, ಫೆ 14 (DaijiworldNews/ AK): ಶೇಕಡ 40ರಷ್ಟು ಕಮಿಷನ್ ಆರೋಪದ ತನಿಖೆ ವಿಚಾರದಲ್ಲಿ ಸರ್ಕಾರ ಕಾಲಹರಣ ಮಾಡುತ್ತಿರುವುದನ್ನು ಕೋರ್ಟ್ ಕೂಡ ಗಮನಿಸಿದ್ದು, ಸರಕಾರದ ಬೊಕ್ಕಸ ಖಾಲಿಯಾಗಿದೆ ಎನ್ನುವುದು ಸ್ಪಷ್ಟವಾಗಿದೆ ಎಂದು ಶಾಸಕ ಬಸವರಾಜ ಬೊಮ್ಮಾಯಿ ಹೇಳಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಂದಿನ ಸರ್ಕಾರದ ಅವಧಿಯಲ್ಲಿ ಕೇಳಿ ಬಂದಿದ್ದ ಶೇ . 40 ಕಮಿಷನ್ ಕುರಿತ ತನಿಖೆಯನ್ನು ಅನಗತ್ಯ ವಿಳಂಬ ಮಾಡುತ್ತಿರುವ ಬಗ್ಗೆ ಹೈಕೋರ್ಟ್ ಗಮನಿಸಿ ಆರು ವಾರದಲ್ಲಿ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿದೆ. ವರದಿ ನೀಡದಿದ್ದರೆ, ಹಣ ಬಿಡುಗಡೆಗೆ ನಾವೇ ನಿರ್ದೇಶನ ನೀಡಬೇಕಾಗುತ್ತದೆ ಎಂದು ಕೋರ್ಟ್ ಹೇಳಿದೆ. ಸರಕಾರ ಈಗಲಾದರೂ ನಾಚಿಕೆ ಬಿಟ್ಟು ಎಚ್ಚೆತ್ತುಕೊಳ್ಳಬೇಕು ಎಂದರು
ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರ ಮೇ ಲೆ ಸರ್ಕಾರ ಒತ್ತಡ ಹೇರುತ್ತಿದೆ. ಹೀಗಾಗಿ ಅವರು ಸರ್ಕಾರದ ಪರವಾಗಿ ಮಾತನಾಡುತ್ತಿದ್ದಾರೆ. ಆ ರೀತಿ ಮಾತನಾಡುವಂತೆ ಅವರ ಮೇಲೆ ಒತ್ತಡ ಹೇರಲಾಗುತ್ತಿದೆ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಸಂಪೂರ್ಣವಾಗಿ ನಿಲ್ಲಿಸಿ ಬಿಟ್ಟಿದ್ದಾರೆ ಎಂದು ಆರೋಪಿಸಿದರು.ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರ ಬಾಯಲ್ಲಿ ಹಸಿ ಸುಳ್ಳನ್ನು ಹೇ ಳಿಸಿದ್ದಾರೆ. ಹಿಂದಿನ ಸರ್ಕಾ ರದ ಸಾಧನೆಗಳನ್ನು ತನ್ನ ಸಾಧನೆ ಎಂ ದು ಸರ್ಕಾ ರ
ಹೇಳಿಕೊಂಡಿದೆ ಎಂದರು.