ಮೈಸೂರು, ಫೆ 15 (DaijiworldNews/HR): ಕಾಂಗ್ರಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಜಾತಿ ಧರ್ಮಗಳ ನಡುವೆ ಎತ್ತಿ ಕಟ್ಟುವುದರಲ್ಲಿ ಕಾಂಗ್ರೆಸ್ ಮೊದಲಿಗರು ಎಂದು ಮಾಜಿ ಸಚಿವ ಡಾ.ಸಿ.ಎನ್ ಅಶ್ವಥ್ ನಾರಾಯಣ್ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರು ಕಂಡ ಕಂಡಲ್ಲಿ ಚೀಲ ಹಿಡಿದುಕೊಂಡು ನಿಂತಿದ್ದಾರೆ. ಮನೆಯ ಕುಟುಂಬಸ್ಥರೇ ಏಜೆಂಟ್ – ಬ್ರೋಕರ್ಸ್ಗಳಾಗಿದ್ದಾರೆ. ಇದು ಭಂಡಗೆಟ್ಟ ಸರ್ಕಾರ ಎಂದರು.
ಇನ್ನು ಸರ್ಕಾರದಿಂದ ಯಾವುದೇ ನಿರೀಕ್ಷೆಯಿಲ್ಲ. ಆಡಳಿತ ಪಕ್ಷದ ಶಾಸಕರಿಗೆ ತೃಪ್ತಿ ಇಲ್ಲ. ಒಬ್ಬರ ಕಣ್ಣಿಗೆ ಬೆಣ್ಣೆ ಒಂದು ಕಣ್ಣಿಗೆ ಸುಣ್ಣ ಎಂಬ ರೀತಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.