ಬೆಂಗಳೂರು, ಫೆ 15(DaijiworldNews/SK): ಮಾಜಿ ಪ್ರಧಾನಿ ಎಚ್. ಡಿ.ದೇವೇಗೌಡ ಅವರಿಗೆ ಉಸಿರಾಟ ಸಮಸ್ಯೆಯಿಂದ ಆರೋಗ್ಯದಲ್ಲಿ ಏರುಪೇರಾಗಿದ್ದು, ಈ ನಿಟ್ಟಿನಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಸದ್ಯದ ಮಾಹಿತಿ ಪ್ರಕಾರ ದೇವೇಗೌಡರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ.
ಮೂಲಗಳ ಪ್ರಕಾರ, ದೇವೇಗೌಡರಿಗೆ ಇಂದು ಬೆಳಿಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಬಳಿಕ ಶ್ವಾಸಕೋಶ ತಜ್ಞ ಡಾ.ಸತ್ಯನಾರಾಯಣ ಅವರು ಪರೀಕ್ಷೆ ನಡೆಸಿ, ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡುತ್ತಿದ್ದು, ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ.
90 ವರ್ಷ ಪೂರ್ಣಗೊಳಿಸಿದ ಎಚ್ಡಿ ದೇವೇಗೌಡ ಅವರು ಸಕ್ರಿಯವಾಗಿ ರಾಜಕಾರಣದಲ್ಲಿದ್ದು, ಸದ್ಯ ಮುಂಬರುವ ಲೋಕಸಭೆ ಚುನಾವಣೆಯ ಪ್ರಚಾರ, ಸಭೆಗಳನ್ನು ನಡೆಸುತ್ತಿದ್ದಾರೆ. ಇಷ್ಟು ಮಾತ್ರವಲ್ಲದೇ ಅಯೋಧ್ಯೆ ರಾಮಮಂದಿರ ಉದ್ಘಾಟನೆಯಲ್ಲೂ ಭಾಗಿಯಾಗಿದ್ದರು.