ಕೋಲ್ಕತ್ತಾ, ಏ 26 (Daijiworld News/SM): ಇತ್ತೀಚಿಗೆ ಸಂದರ್ಶನವೊಂದರಲ್ಲಿ ಮಮತಾ ಬ್ಯಾನರ್ಜಿಯವರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಹೇಳಿಕೆಗೆ ಇದೀಗ ಮಮತಾ ಬ್ಯಾನರ್ಜಿ ತಿರುಗೇಟು ನೀಡಿದ್ದಾರೆ. ಪ್ರತಿ ವರ್ಷ ಸಿಹಿ-ತಿಂಡಿ ಪಡೆದುಕೊಳ್ಳುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನೀಡಿದ್ದರು. ಈ ಮಾತಿನಿಂದ ಆಕ್ರೋಶಗೊಂಡಿರುವ ಮಮತಾ ಮೋದಿ ವಿರುದ್ಧ ಗುಡುಗಿದ್ದಾರೆ.
ಇನ್ನು ಅವರಿಗೆ ಕಲ್ಲು-ಮಣ್ಣಿನಿಂದ ಕೂಡಿದ ಸಿಹಿ ತಿಂಡಿ ತಯಾರಿಸಿ ಕಳುಹಿಸುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು ಪ್ರಧಾನಿಯಾದ ಬಳಿಕ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿರಲಿಲ್ಲ. ಆದರೆ ಲೋಕಸಭಾ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಪದೇ ಪದೇ ಇಲ್ಲಿಗೆ ಭೇಟಿ ನೀಡುತ್ತಿದ್ದಾರೆ.
ಕೇವಲ ಚುನಾವಣೆ ದೃಷ್ಠಿಯಿಂದ ಮಾತ್ರ ಅವರು ಬರುತ್ತಿರುವುದು ಎಂದು ವಾಗ್ದಾಳಿ ನಡೆಸಿದ್ದಾರೆ. ವೋಟ್ ನೀಡಲು ಅವರಿಗೆ ಪಶ್ಚಿಮ ಬಂಗಾಳದ ಜನತೆ ಬೇಕು. ಆದರೆ ಅಭಿವೃದ್ಧಿ ವಿಚಾರಕ್ಕೆ ಯಾವುದೇ ಕೊಡುಗೆ ನೀಡಿಲ್ಲ ಎಂದರು.