ಬೆಂಗಳೂರು, ಫೆ 15 (DaijiworldNews/HR): ಫೆ.16ರ ಶುಕ್ರವಾರ (ನಾಳೆ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 15ನೇ ಬಜೆಟ್ ಮಂಡಿಸಲಿದ್ದಾರೆ.
ಲೋಕಸಭೆ ಚುನಾವಣೆ ದೃಷ್ಟಿಯಲ್ಲಿ ಮಹತ್ವ ಪಡೆದ ನಾಳಿನ ಬಜೆಟ್ನಲ್ಲಿ ಮಹತ್ವದ ಘೋಷಣೆಗಳನ್ನು ಮಾಡುವ ನಿರೀಕ್ಷೆಯೂ ಇದೆ.
ಇನ್ನು ಕರ್ನಾಟಕದ ಬಜೆಟ್ ಈವರೆಗೂ ಗಾತ್ರ 3.27 ಲಕ್ಷ ಕೋಟಿ ರೂಪಾಯಿ ದಾಟಿರಲಿಲ್ಲ. ಆದರೆ ಈ ಬಾರಿ ಸುಮಾರು 50 ಸಾವಿರ ಕೋಟಿ ರೂಪಾಯಿ ಹೆಚ್ಚಳವಾಗಲಿದೆ ಎಂದು ವರದಿಯಾಗಿದೆ.