ಬೆಂಗಳೂರು, ಫೆ 16 (DaijiworldNews/HR): ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧಕ್ಕೆ ಆಗಮಿಸಿದ್ದಾರೆ. ಕೆಲವೇ ಹೊತ್ತಿನಲ್ಲಿ ಸಿಎಂ ನೇತೃತ್ವದಲ್ಲಿ ಸಂಪುಟ ಸಭೆ ಆರಂಭವಾಗಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡಲಿದ್ದು, ಸಿದ್ದರಾಮಯ್ಯ ಮಂಡನೆ ಮಾಡುತ್ತಿರುವ 15ನೇ ಬಜೆಟ್ ಇದಾಗಿದೆ.
ಇನ್ನು ಲೋಕಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಬಜೆಟ್ ಮೇಲಿನ ನಿರೀಕ್ಷೆ, ಕುತೂಹಲಗಳೂ ಹೆಚ್ಚಾಗಿದೆ.