ಬೆಂಗಳೂರು, ಫೆ 16 (DaijiworldNews/SK): 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡಲಿರುವ ಸಿಎಂ ಸಿದ್ದರಾಮಯ್ಯ ಅವರು ಮೊದಲ ಬಾರಿಗೆ ಸೂಟ್ಕೇಸ್ ಬಿಟ್ಟು ಲಿಡ್ಕರ್ ಸಂಸ್ಥೆಯ ಲೆದರ್ ಬ್ಯಾಗ್ನಲ್ಲಿ ಬಜೆಟ್ ಪ್ರತಿಗಳನ್ನು ಹೊತ್ತು ತರುವ ಮೂಲಕ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ.
ಇಂದು ಸಿದ್ದರಾಮಯ್ಯ ಅವರು ಮಂಡನೆ ಮಾಡುತ್ತಿರುವ 15ನೇ ಬಜೆಟ್ ಇದಾಗಿದ್ದು, ಇದಕ್ಕೂ ಮೊದಲ 14 ಬಜೆಟ್ಗಳಲ್ಲಿ ಬ್ರಿಟೀಷರ ಸಂಪ್ರದಾಯದಂತೆ ಸೂಟ್ಕೇಸ್ನಲ್ಲಿ ಬಜೆಟ್ ಪ್ರತಿಗಳನ್ನು ಹೊತ್ತು ತಂದು ಅದನ್ನು ರಾಜ್ಯದ ಜನತೆಗೆ ತೋರಿಸಿ ಬಜೆಟ್ ಮಂಡನೆ ಮಾಡುತ್ತಿದ್ದರು. ಆದರೆ, ಈ ಬಾರಿ ಮೊದಲ ಬಾರಿಗೆ ತಮ್ಮ ಸಂಪ್ರದಾಯವನ್ನು ಬದಲಿಸಿಕೊಂಡಿದ್ದಾರೆ.
ಬ್ರಿಟೀಷ್ ಆಡಳಿತದ ಕಾಲದಿಂದಲೂ ಇಲ್ಲಿಯವರೆಗೆ ಸೂಟ್ಕೇಸ್ನಲ್ಲಿ ಬಜೆಟ್ ಪ್ರತಿಗಳನ್ನು ತಂದು ಬಜೆಟ್ ಮಂಡಿಸುವ ಸಂಪ್ರದಾಯ ಪಾಲನೆ ಮಾಡಲಾಗುತ್ತಿತ್ತು. ಕೇಂದ್ರ ಸರ್ಕಾರ ಮತ್ತು ಎಲ್ಲ ರಾಜ್ಯ ಸರ್ಕಾರಗಳೂ ಕೂಡ ಇದೇ ಸಂಪ್ರದಾಯ ಪಾಲನೆ ಮಾಡುತಿತ್ತು.
ಆದರೆ, ಈ ಬಾರಿ 2024ನೇ ಸಾಲಿನ ಮಧ್ಯಂತರ ಬಜೆಟ್ ಮಂಡನೆಗೆಗೂ ಮೊದಲ ಬಾರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಪ್ರತಿಗಳನ್ನು ತರಲು ಸೂಟ್ಕೇಸ್ ಬದಲಾಗಿ ಬ್ಯಾಗ್ ಬಳಕೆ ಮಾಡಿದ್ದರು.