ಬೆಂಗಳೂರು, ಫೆ 16 (DaijiworldNews/HR): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ 15ನೇ ಬಜೆಟ್ ಮಂಡನೆ ಮಾಡುತ್ತಿದ್ದು, ರಾಜ್ಯದಲ್ಲಿನ ವಕ್ಫ್ ಆಸ್ತಿಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನ ಹಾಗೂ ಕ್ರಿಶ್ಚಿಯನ್ ಸಮುದಾಯಕ್ಕೆ 200 ಕೋಟಿ ರೂ. ಘೋಷಣೆ ಮಾಡಿದ್ದಾರೆ.
ರಾಜ್ಯದಲ್ಲಿನ ವಕ್ಫ್ ಆಸ್ತಿಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನ ಒದಗಿಸಲಾಗುವುದು ಹಾಗೂ ಭಾರತೀಯ ಪುರಾತತ್ವ ಇಲಾಖೆಯ ವ್ಯಾಪ್ತಿಯಲ್ಲಿರುವ ವಕ್ಫ್ ಆಸ್ತಿಗಳನ್ನು ಆದ್ಯತೆಯ ಮೇರೆಗೆ ಅಭಿವೃದ್ಧಿಪಡಿಸಲಾಗುವುದು ಎಂದರು.
ಇನ್ನು ಅಲ್ಪಸಂಖ್ಯಾತ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ವಿವಿಧ ರೀತಿಯ ಸ್ವಯಂ ಉದ್ಯೋಗ ಚಟುವಟಿಕೆಗಳಿಗೆ ಉತ್ತೇಜನ ನೀಡಲು 10 ಕೋಟಿ ರೂ. ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.
ಅಲ್ಪಸಂಖ್ಯಾತ ಸಮುದಾಯಗಳಲ್ಲಿ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡುವ ಮೂಲಕ ಅವರ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ ಹಲವು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದಿದ್ದಾರೆ.
ಇನ್ನು 100 ಹೊಸ ಮೌಲಾನಾ ಆಜಾದ್ ಶಾಲೆಗಳನ್ನು ತೆರೆಯಲಾಗುವುದು ಎಂದು ತಿಳಿಸಿದ್ದಾರೆ.