ಬೆಂಗಳೂರು, ಫೆ 15 (DaijiworldNews/MS): ಸಿಎಂ ಸಿದ್ದರಾಮಯ್ಯ ಅವರು ಇಂದು ಮಂಡಿಸಿರುವ ಬಜೆಟ್ ನಲ್ಲಿ ಮೂಲಸೌಕರ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ ನೀಡಿದ ಪ್ರಮುಖ ಕೊಡುಗೆ:
ಕಾರವಾರ, ಮಲ್ಪೆ ಮತ್ತು ಹಳೇ ಮಂಗಳೂರು ಬಂದರುಗಳಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಡಿ ನಾಲ್ಕು ಬರ್ತ್ಗಳನ್ನು ಅಭಿವೃದ್ಧಿಪಡಿಸಲು ಗುರುತಿಸಲಾಗಿದೆ.
ಕಾರವಾರ, ಹಳೆ ಮಂಗಳೂರು ಮತ್ತು ರಾಜ್ಯದ 11 ಕಿರು ಬಂದರುಗಳಲ್ಲಿ ಸುಗಮ ಸಂಚಾರಕ್ಕಾಗಿ ಹೂಳೆತ್ತುವ ಕಾಮಗಾರಿಗಳನ್ನು ಹಂತ ಹಂತವಾಗಿ ಕೈಗೆತ್ತಿಗೊಳ್ಳಲಾಗುತ್ತಿದೆ.
ಉತ್ತರ ಕನ್ನಡ ಜಿಲ್ಲೆಯ ಮಂಕಿಯಲ್ಲಿ ವಿವಿಧೋದ್ದೇಶ ಬಂದರಿನ ಅಭಿವೃದ್ಧಿಗೆ ಕಾರ್ಯಸಾಧ್ಯತಾ ವರದಿಯನ್ನು ತಯಾರಿಸಲಾಗುತ್ತಿದೆ.
ಕಾರವಾರ ಬಂದರಿನಲ್ಲಿ ಬೆಂಕಿ ನಂದಿಸುವ ಉಪಕರಣಗಳ ಅಳವಡಿಕೆ ಕಾಮಗಾರಿಯನ್ನು ಕೈಗೊಳ್ಳಲಾಗುವುದು.
ಹಳೇ ಮಂಗಳೂರು ಬಂದರಿನಲ್ಲಿ 350 ಮೀ. ಉದ್ದದ ಕೋಸ್ಟಲ್ ಬರ್ತ್ ನಿರ್ಮಾಣ ಕಾಮಗಾರಿಯನ್ನು 2024-25ನೇ ಸಾಲಿನಲ್ಲಿ ಪೂರ್ಣಗೊಳಿಸಲಾಗುವುದು.
ಹಳೆ ಮಂಗಳೂರು ಮತ್ತು ಹಂಗಾರಕಟ್ಟೆ ಬಂದರುಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಆಧುನಿಕ ಹಡಗು ನಿರ್ಮಾಣ ಚಟುವಟಿಕೆಗಳನ್ನು ಪ್ರಾರಂಭಿಸಲಾಗಿದೆ. ಈ ವಲಯದಲ್ಲಿ ಇನ್ನೂ ಹೆಚ್ಚು ಹೂಡಿಕೆಯನ್ನು ಆಕರ್ಷಿಸಲು ಆದ್ಯತೆ ನೀಡಲಾಗುವುದು.
ಮೂಲಸೌಕರ್ಯ ಅಭಿವೃದ್ದಿ ಇಲಾಖೆಯಡಿಯಲ್ಲಿ ಕಾರ್ಯಸಾಧ್ಯತಾ ವರದಿಗಳ ತಯಾರಿಕೆಗಾಗಿ Karnataka Infrastructure Project Development Fund ಅನ್ನು (KIPDF) ಸ್ಥಾಪಿಸಲಾಗಿದ್ದು, ಇದನ್ನು ಆರ್ಥಿಕವಾಗಿ ಮತ್ತಷ್ಟು ಸದೃಢಗೊಳಿಸಲಾಗುವುದು ಮತ್ತು ಈ ಕೆಳಕಂಡ ಯೋಜನೆಗಳ ಕಾರ್ಯಸಾಧ್ಯತಾ ವರದಿಯನ್ನು ತಯಾರಿಸಲು ನುರಿತ ಸಂಸ್ಥೆಗಳನ್ನು (Transaction Advisor) ನೇಮಿಸಿಕೊಳ್ಳಲಾಗುವುದು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಕ್ರೂಸ್ ಮತ್ತು ಪ್ರವಾಸೋದ್ಯಮ ಬಂದರನ್ನು (ICTP) ಅಭಿವೃದ್ಧಿಪಡಿಸಲು ಐ.ಐ.ಟಿ. ಮದ್ರಾಸ್ ಸಹಯೋಗದೊಂದಿಗೆ ಕಾರ್ಯಸಾಧ್ಯತಾ ವರದಿಯನ್ನು ತಯಾರಿಸಲಾಗುವುದು.
ದ್ವೀಪಗಳ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ಅನ್ನು ತಯಾರಿಸಲಾಗುವುದು.
ಮಂಗಳೂರಿನ ಗುರುಪುರ ಹಾಗೂ ನೇತ್ರಾವತಿ ನದಿಗಳಲ್ಲಿ ಜಲಮೆಟ್ರೋ ಸೇವೆಗಳನ್ನು ಪರಿಚಯಿಸಲು ಕಾರ್ಯಸಾಧ್ಯತಾ ವರದಿಯನ್ನು ತಯಾರಿಸಲಾಗುವುದು.