ಬೆಂಗಳೂರು, ಫೆ 15 (DaijiworldNews/MS): ಸಾಲವೇ ಎಲ್ಲದಕ್ಕೂ ವಾಮಮಾರ್ಗ ಎಂದುಕೊಂಡಿರುವ ಈ ಶತಮಾನದ ನಕಲಿ ಅರ್ಥ ಶಾಸ್ತ್ರಜ್ಞ ಸಿದ್ದರಾಮಯ್ಯ ಅವರು ಕರ್ನಾಟಕವನ್ನು ಸಾಲ ರಾಜ್ಯವನ್ನಾಗಿ ಪರಿವರ್ತಿಸಿದ್ದಾರೆ ಎಂದು ಬಿಜೆಪಿ ಕಿಡಿಕಾರಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿಯೂ ಇದು ಬಜೆಟ್ ಅಲ್ಲ - ಇದು ಕರ್ನಾಟಕ ಜನತೆಯ ಕಿವಿ ಮೇಲೆ ಹೂವಿನ ತೋಟ ಎಂದು ಲೇವಡಿ ಮಾಡಿದೆ.
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಕೇವಲ 9 ತಿಂಗಳಲ್ಲಿ ₹1,93,246 ಕೋಟಿ ಸಾಲ ಮಾಡಿದ್ದಾರೆ. ಅಂದರೆ ಪ್ರತಿಯೊಬ್ಬ ಕನ್ನಡಿಗನ ತಲೆ ಮೇಲೆ ₹28 ಸಾವಿರ ಸಾಲ ಹೇರಿದ್ದಾರೆ. ಸಾಲರಾಮಯ್ಯನವರು ಒಂದು ಸಮುದಾಯದ ತುಷ್ಟೀಕರಣಕ್ಕಾಗಿ ಲಕ್ಷಾಂತರ ಕೋಟಿ ಸಾಲ ಮಾಡಿ ಕನ್ನಡಿಗರನ್ನು ಸಂಪೂರ್ಣವಾಗಿ ಮುಳುಗಿಸಿದ್ದಾರೆ.ಸಾಲದ ಸುಳಿಗೆ ಕರುನಾಡು ಸಿಲುಕಿದೆ. ಕರ್ನಾಟಕ ಅಭಿವೃದ್ಧಿಯಲ್ಲಿ 20 ವರ್ಷ ಹಿಂದಕ್ಕೆ ಬಿದ್ದಿದೆ. ಆರ್ಥಿಕತೆ ಹಳ್ಳ ಹಿಡಿದಿದೆ ಎಂದು ಲೇವಡಿ ಮಾಡಿದೆ.