ವಿರುದುನಗರ, ಫೆ 17(DaijiworldNews/AA): ತಮಿಳುನಾಡು ವಿರುದುನಗರ ಜಿಲ್ಲೆಯ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಪೋಟದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಈ ದುರಂತದ ಬಗ್ಗೆ ಪ್ರಧಾನಿ ಮೋದಿ ಅವರು ಆಘಾತ ವ್ಯಕ್ತಪಡಿಸುವುದರೊಂದಿಗೆ ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿದ್ದಾರೆ. ಜೊತೆಗೆ ತಮಿಳುನಾಡು ಸರ್ಕಾರ ಸಹ ಮೃತರ ಕುಟುಂಬಗಳಿಗೆ ತಲಾ 3 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.
ಈ ಸ್ಪೋಟದಲ್ಲಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ ನಾಲ್ಕು ಮಂದಿ ಮಹಿಳೆಯರು ಹಾಗೂ ಆರು ಮಂದಿ ಪುರುಷರು ಮೃತಪಟ್ಟಿದ್ದಾರೆ. ಇನ್ನು ಈ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳದಲ್ಲಿ ಭಾರೀ ಪ್ರಮಾಣದ ರಾಸಾಯನಿಕ ವಸ್ತುಗಳನ್ನು ಸಂಗ್ರಹಿಸಿಡಲಾಗಿತ್ತು ಎನ್ನಲಾಗಿದೆ.