ಕೋಲ್ಕತ್ತ, ಫೆ 18(DaijiworldNews/AK): ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಪಶ್ಚಿಮ ಬಂಗಾಳದ ಯೋಜನೆಗಳು ಜನರಿಗೆ ತಲುಪದಂತೆ ತಡೆಯಲು ಆಧಾರ್ ಕಾರ್ಡ್ ಅನ್ನು ನಿಷ್ಕ್ರಿ ಯಗೊಳಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.
ಬಿರ್ಭೂಮ್ ಜಿಲ್ಲೆಯಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜನರು ಸಾಮಾಜಿಕ ಯೋಜನೆಗಳ ಪ್ರಯೋಜನ ಪಡೆಯುವುದನ್ನು ತಡೆಯಲು ಕೇಂದ್ರ ಯತ್ನಿಸುತ್ತಿದೆ ಎಂದು ಟೀಕಿಸಿದ್ದಾರೆ.
ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳ ಜನರ ಆಧಾರ್ ಕಾರ್ಡ್ ಗಳನ್ನು ಡಿಲಿಂಕ್ ಮಾಡಿದೆ. ಆದರೆ ಆಧಾರ್ ಕಾರ್ಡ್ಇಲ್ಲದಿದ್ದರೂ ಪ್ರತಿಯೊಬ್ಬ ಫಲಾನುಭವಿಗೂ ಯೋಜನೆಗಳ ಪ್ರಯೋಜನೆ ಪಡೆಯಲು ನಮ್ಮ ಸರ್ಕಾರ ಕಾರ್ಯ ನಿರ್ವಹಿಸುತ್ತದೆ.ಯಾವ ಫಲಾನುಭವಿಗೂ ತೊಂದರೆಯಾಗಲು ಬಿಡುವುದಿಲ್ಲ ಎಂದರು.
ಹರಿಯಾಣ, ಪಂಜಾಬ್ನಲ್ಲಿ ರೈತರು ತಮ್ಮ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಆಗ್ರಹಿಸಿ ದೆಹಲಿ ಚಲೋ ನಡೆಸುತ್ತಿರುವ ಬಗ್ಗೆ ಮಾತನಾಡಿದ , ಬಂಗಾಳದ ರೈತರು ಅಂತಹ ಯಾವುದೇ ಸಮಸ್ಯೆ ಎದುರಿಸುತ್ತಿಲ್ಲ ಎಂದು ಹೇಳಿದ್ದಾರೆ.