ಬೆಂಗಳೂರು, ಫೆ 19 (DaijiworldNews/MS): ಬೆಂಗಳೂರಿನ ದಕ್ಷಿಣ ತಾಲೂಕಿನ ರಾಮಸಂದ್ರದ ಪರ್ಪ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಗೊಡೌನ್ ಮಾಲಿಕ ಸಲೀಂ ಮತ್ತು ಜಾಗದ ಮಾಲೀಕ ವಿಠ್ಠಲ್ ವಿರುದ್ಧ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಇನ್ನು ಪ್ರಕರಣ ದಾಖಲಾಗುತ್ತಿದ್ದಂತೆ ವಿಠ್ಠಲ್ ಪರಾರಿಯಾಗಿದ್ದಾನೆ.
ಪರ್ಫ್ಯೂಮ್ ಕಾರ್ಖಾನೆಯಲ್ಲಿ ನಿನ್ನೆ ಸಂಜೆ ನಡೆದ ಅಗ್ನಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಮೂವರು ಕಾರ್ಮಿಕರು ಸಜೀವದಹನವಾಗಿದ್ದರು. ಅವಘಡದಲ್ಲಿ ಐವರು ಗಾಯಗೊಂಡಿದ್ದಾರೆ ಗಂಭೀರ ಗಾಯಗೊಂಡ ಅಲ್ಲಾಭಕ್ಷ, ಅಫ್ರೋಜ್, ರಿಯಾಜ್, ಸಾಧಿಕ್, ಇಮ್ರಾನ್ರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.ನ್ನು ಗಾಯಗೊಂಡವರಲ್ಲಿ 10 ವರ್ಷದ ಬಾಲಕನಿದ್ದು, ಈತನಿಗೆ ಶೇ60 ರಷ್ಟು ಸುಟ್ಟ ಗಾಯಗಳಾಗಿವೆ. ಬಾಲಕ ರಿಹಾನ್ ಸ್ಥಿತಿ ಗಂಭೀರವಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಉಳಿದ ಐವರಿಗೆ ಶೇ25 ರಷ್ಟು ಸುಟ್ಟ ಗಾಯಗಳಾಗಿವೆ.
ಕಳೆದ ಒಂದು ತಿಂಗಳ ಹಿಂದಷ್ಟೆ ಗೋದಾಮು ಆರಂಭಿಸಿದ್ದು, FSL ತಜ್ಞರ ವರದಿ ಬಳಿಕ ಘಟನೆಗೆ ಸ್ಪಷ್ಟ ಕಾರಣ ಗೊತ್ತಾಗಲಿದೆ. ಐಪಿಸಿ ಸೆಕ್ಷನ್ 420, 304, 467, 64, 67 ಅಡಿ ದೂರು ದಾಖಲಾಗಿದೆ.