ಬೆಂಗಳೂರು,ಎ27(Daijiworld News/SS): ರಾಜ್ಯದಲ್ಲಿ ಮತ್ತೆ ಆರಂಭವಾಗಿರುವ ಆಪರೇಷನ್ ಕಮಲದ ಬಗ್ಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆತಂಕಗೊಂಡಿದ್ದು, ತಮ್ಮ ಪಕ್ಷದ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಶಾಸಕಾಂಗ ಸಭೆ ಕರೆದಿದ್ದಾರೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ ಬೆದರಿಕೆ ಬೆನ್ನಲ್ಲೇ ಕುಮಾರಸ್ವಾಮಿ ಆಪರೇಷನ್ ಕಮಲಕ್ಕೆ ತಡೆಯೊಡ್ಡಲು ಮುಂದಾಗಿದ್ದಾರೆ.
ಲೋಕಸಭೆ ಚುನಾವಣೆ ಬಳಿಕ ನಡೆಯುವ ಮೊದಲ ಜೆಡಿಎಸ್ ಶಾಸಕಾಂಗ ಸಭೆ ಇದಾಗಿದ್ದು, ಸಭೆಯಲ್ಲಿ ಆಪರೇಷನ್ ಕಮಲದ ಬಗ್ಗೆ, ಲೋಕಸಭೆ ಕ್ಷೇತ್ರಗಳ ಚುನಾವಣಾ ಫಲಿತಾಂಶ, ಬರ ಸ್ಥಿತಿಗತಿ ಮತ್ತು ಶಾಸಕರ ಕ್ಷೇತ್ರವಾರು ಸಮಸ್ಯೆ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ರಮೇಶ್ ಜಾರಕಿಹೊಳಿ ಅವರ ಜೊತೆ ಮೈತ್ರಿ ಪಕ್ಷದ ಶಾಸಕರು ಯಾರೆಲ್ಲಾ ಸಂಕರ್ಪದಲ್ಲಿದ್ದಾರೆ. ಅವರನ್ನು ಮನವೊಲಿಸಿ ಪಕ್ಷದಲ್ಲಿ ಉಳಿಸಿಕೊಳ್ಳುವುದು, ಯಾವುದೇ ಆಮಿಷಕ್ಕೆ ಪಕ್ಷದ ಶಾಸಕರು ಬಲಿಯಾಗದಂತೆ ತಡೆಯುವ ತಂತ್ರಗಾರಿಕೆ ಇದೆ ಎನ್ನಲಾಗಿದೆ.
ಯಾವುದೇ ಕಾರಣಕ್ಕೂ ಪಕ್ಷದ ಶಾಸಕರು ಬಿಜೆಪಿಗೆ ಹೋಗದಂತೆ ಅವರನ್ನು ಹಿಡಿದಿಟ್ಟುಕೊಳ್ಳಲು ಖಾಸಗಿ ಹೋಟೆಲ್ನಲ್ಲಿ ಜೆಡಿಎಸ್ ಶಾಕರಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಔತಣಕೂಟದ ಜೊತೆಗೆ ಶಾಸಕಾಂಗ ಸಭೆ ಆಯೋಜಿಸಿದ್ದಾರೆ.