ನವದೆಹಲಿ, ಫೆ 19 (DaijiworldNews/HR): ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಜಾರಿ ಮಾಡಿರುವ ಆರನೇ ಸಮನ್ಸ್ಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೈರಾಗಲಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಆಮ್ ಆದ್ಮಿ ಪಕ್ಷ, ಈ ಸಮನ್ಸ್ ಕಾನೂನುಬಾಹಿರ ಎಂಬ ತನ್ನ ನಿಲುವನ್ನು ಪುನರುಚ್ಚರಿಸಿದ್ದು, ಸದ್ಯ ಈ ವಿಷಯ ನ್ಯಾಯಾಲಯದಲ್ಲಿದೆ ಎಂದು ಹೇಳಿದೆ.
ಇನ್ನು ಜಾರಿ ನಿರ್ದೇಶನಾಲಯವು ನಿರಂತರವಾಗಿ್ ಅರವಿಂದ್ ಕೇಜ್ರಿವಾಲ್ ಅವರಿಗೆ ಸಮನ್ಸ್ ಜಾರಿಗೊಳಿಸುತ್ತಿದ್ದು, ಆ ಎಲ್ಲ ಸಮನ್ಸ್ಗಳಿಗೂ ಕೇಜ್ರಿವಾಲ್ ಗೈರಾಗಿದ್ದಾರೆ.