ನವದೆಹಲಿ, ಫೆ 20 (DaijiworldNews/HR): ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ 2018ರಲ್ಲಿ ನೀಡಿದ್ದ ಹೇಳಿಕೆಗೆ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಜಾಮೀನು ಮಂಜೂರಾಗಿದೆ.
ಉತ್ತರ ಪ್ರದೇಶದ ಸುಲ್ತಾನಪುರದ ವಿಶೇಷ ನ್ಯಾಯಾಲಯವು ರಾಹುಲ್ ಗಾಂಧಿಗೆ ಜಾಮೀನು ಮಂಜೂರು ಮಾಡಿದ್ದು, 25,000 ರೂ.ಗಳ ಶ್ಯೂರಿಟಿ ಮತ್ತು ಅಷ್ಟೇ ಮೊತ್ತದ ವೈಯಕ್ತಿಕ ಬಾಂಡ್ ಮೇಲೆ ರಾಹುಲ್ ಗಾಂಧಿಗೆ ಜಾಮೀನು ನೀಡಲಾಗಿದೆ.
ಇನ್ನು 2018 ರ ಕರ್ನಾಟಕ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ ಬೆಂಗಳೂರಿನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆ ನೀಡಿದ್ದರು.