ಬೆಂಗಳೂರು, ಫೆ 21 (DaijiworldNews/HR): ಖಾಸಗಿ ಶಾಲೆಗಳಲ್ಲಿ ಇನ್ನು ಮುಂದೆ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂಬ ಸುತ್ತೋಲೆಯನ್ನು ರಾಜ್ಯ ಸರ್ಕಾರ ಹೊರಡಿಸಿರುವುದಾಗಿ ವರದಿಯಾಗಿದೆ.
ಖಾಸಗಿ ಶಾಲೆಗಳಿಗೆ ನಾಡಗೀತೆ ಹಾಡುವುದಕ್ಕೆ ವಿನಾಯಿತಿ ನೀಡಿದ ಸರ್ಕಾರ ಸರ್ಕಾರಿ ಶಾಲೆಗಳು ಮತ್ತು ಅನುದಾನಿತ ಶಾಲೆಗಳಲ್ಲಿ ಮಾತ್ರ ನಾಡಗೀತೆ ಹಾಡಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶವನ್ನು ಹೊರಡಿಸಿದೆ.
ಇನ್ನು ಈ ಹಿಂದೆ ಎಲ್ಲಾ ಶಾಲೆಗಳಲ್ಲಿ ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ನಾಡಗೀತೆಯನ್ನು ಹಾಡಬೇಕಿತ್ತು. ಇದಲ್ಲದೆ ಸರ್ಕಾರಿ ಇಲಾಖೆ, ಕಚೇರಿ, ಪ್ರಾಧಿಕಾರಗಳು, ಸರ್ಕಾರದ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಮುನ್ನ ನಾಡಗೀತೆ ಹಾಡಬೇಕು ಎಂದು ಆದೇಶಿಸಲಾಗಿತ್ತು.