ನವದೆಹಲಿ, ಫೆ 22 (DaijiworldNews/HR): ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ದೆಹಲಿಯಲ್ಲಿ ಗುರುವಾರ ಭೇಟಿ ಮಾಡಿದ್ದಾರೆ.
ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವಿನ ಸೀಟು ಹಂಚಿಕೆ ವಿಚಾರದ ಬಗ್ಗೆ ಕುಮಾರಸ್ವಾಮಿ ಅವರು ಗೃಹಸಚಿವರೊಂದಿಗೆ ಚರ್ಚೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇನ್ನು ಅಮಿತ್ ಶಾ ಅವರ ಭೇಟಿ ಸಂದರ್ಭದಲ್ಲಿ ಯುವ ಜನತಾದಳದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಜೊತೆಗಿದ್ದರು.