ಬೆಂಗಳೂರು, ಫೆ 23(DaijiworldNews/AK): ವಸತಿ ಶಾಲೆಗಳಲ್ಲಿ ಸದ್ಯ ರಾಜ್ಯ ಪಠ್ಯಕ್ರಮ ಇದೆ. ಪ್ರತಿ ಜಿಲ್ಲೆಗೆ ಒಂದು ವಸತಿ ಶಾಲೆಯಲ್ಲಿ ಸಿಬಿಎಸ್ಸಿ ಪಠ್ಯ ಅಳವಡಿಕೆಗೆ ಕ್ರಮ ವಹಿಸಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ.ಮಹದೇವಪ್ಪ ಹೇಳಿದ್ದಾರೆ.
ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಅನಿಲ್ ಕುಮಾರ್ ಪ್ರಶ್ನೆಗೆ ಉತ್ತರ ನೀಡಿದ ಅವರು, ಪ್ರಸ್ತುತ 84 ವಸತಿ ಶಾಲೆಗಳಲ್ಲಿ ಪಿಯುಸಿ ತರಗತಿಗಳಿವೆ. ಉಳಿದ ವಸತಿ ಶಾಲೆಗಳಲ್ಲಿ ಪಿಯುಸಿ ತರಗತಿ ಆರಂಭ ಮಾಡಲು ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದಕ್ಕೆ ಆರ್ಥಿಕ ಇಲಾಖೆಯು ಅನುಮತಿ ನೀಡಿಲ್ಲ. ವಸತಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದರು.
ಇನ್ನು ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಅನಿಲ್ ಕುಮಾರ್ ಅವರು ವಸತಿ ಶಾಲೆಯಲ್ಲಿ ಸಿಬಿಎಸ್ಸಿ ಪಠ್ಯಕ್ರಮ ಅಳವಡಿಸಬೇಕು. ಜೊತೆಗೆ ಪಿಯುಸಿ ತರಗತಿಗಳನ್ನು ಪ್ರಾರಂಭಿಸಬೇಕು. ಈ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆ ನೇಮಕ ಮಾಡಬೇಕು. ವಸತಿ ಶಾಲಾ ಶಿಕ್ಷರ ಸಂಬಂಳ ಪ್ರತಿ ತಿಂಗಳು ಬೇಗ ನೀಡಬೇಕು. ಶಿಕ್ಷಣ ಇಲಾಖೆಯ ಶಿಕ್ಷಕರ ವೇತನ ಮೊದಲ ತಿಂಗಳೇ ಬಿಡುಗಡೆಯಾಗುವಂತೆ ವಸತಿ ಶಾಲೆಯಲ್ಲೂ ಜಾರಿ ಮಾಡಿ. ವಸತಿ ಶಾಲೆಯ ಮಕ್ಕಳಿಗೆ ಬೆಡ್, ಶೂ, ಸೋಪ್ ಬಾಕ್ಸ್ ನೀಡಿಲ್ಲ ಎಂದು ಆರೋಪಿಸಿದ್ದರು.