ಬೆಂಗಳೂರು, ಫೆ 23(DaijiworldNews/AA): ಬಾಂಗ್ಲಾ ಪ್ರಜೆಗಳ ಅಕ್ರಮ ಮಾನವ ಕಳ್ಳಸಾಗಾಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ದಳ(ಎನ್ಐಎ) ತನಿಖೆ ನಡೆಸುತ್ತಿದ್ದು, ಇದೀಗ ಎನ್ಐಎ ಮತ್ತಿಬ್ಬರನ್ನು ಬಂಧಿಸಿದೆ.
ಮೊಹಮ್ಮದ್ ಸಜ್ಜಿದ್ ಹಲ್ದಾರ್ ಮತ್ತು ಇದ್ರಿಸ್ ಬಂಧಿತ ಆರೋಪಿಗಳು.
ಐಎಸ್ಡಿ ಹಾಗೂ ಎನ್ಐಎ ಈ ಕಾರ್ಯಾಚರಣೆಯನ್ನು ಜಂಟಿಯಾಗಿ ನಡೆಸಿದ್ದು, ಆರೋಪಿಗಳಿಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಮಾನವ ಕಳ್ಳಸಾಗಾಣೆಗೆ ಸಂಬಂಧಿಸಿದಂತೆ ಹಿಂದಿನ ವರ್ಷ ನವೆಂಬರ್ ನಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ದಾಖಲಾದ ನಂತರ ಇಬ್ಬರು ಆರೋಪಿಗಳು ಪರಾರಿಯಾಗಿದ್ದರು. ಆರೋಪಿಗಳು 20 ಕ್ಕೂ ಅಧಿಕ ಪ್ರಜೆಗಳನ್ನು ಬೆಂಗಳೂರಿಗೆ ಕರೆತಂದಿದ್ದರು ಎನ್ನಲಾಗಿದೆ.
ಮತ್ತೊಬ್ಬ ಆರೋಪಿ ಇದ್ರಿಸ್ ಅನಂದಪುರದಲ್ಲಿ ತ್ಯಾಜ್ಯ ಸಂಗ್ರಹಣೆ ಮತ್ತು ಬೇರ್ಪಡಿಸುವ ಘಟಕವನ್ನು ತೆರೆದಿದ್ದ. ಇನ್ನೋರ್ವ ಆರೋಪಿ ಹಲ್ದಾರ್ ರಾಮಮೂರ್ತಿನಗರದ ಕೆ ಚನ್ನಸಂದ್ರದಲ್ಲಿ ತ್ಯಾಜ್ಯ ಸಂಗ್ರಹಣೆ ಮಾಡುತ್ತಿದ್ದನು. ಆರೋಪಿಗಳಿಬ್ಬರನ್ನು ಬಂಧಿಸಿರುವ ಎನ್ಐಎ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.