ಬೆಂಗಳೂರು, ಫೆ 25(DaijiworldNews/MS): ಸುರಪುರ ವಿಧಾನಸಭೆ ಕ್ಷೇತ್ರದ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.
"ರಾಜಾ ವೆಂಕಟಪ್ಪ ನಾಯಕ ಅವರ ನಿಧನದ ಸುದ್ದಿ ಕೇಳಿ ಬೇಸರವಾಗಿದೆ. ಪಕ್ಷದ ನಿಷ್ಠಾವಂತ ನಾಯಕರಾದ ಇವರು ಕೆಲ ದಿನಗಳ ಹಿಂದಷ್ಟೇ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು.
ಅವರ ಆತ್ಮಕ್ಕೆ ಶಾಂತಿ ಸಿಗಲಿ, ಈ ಅಗಲಿಕೆ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳಿಗೆ ಕರುಣಿಸುವಂತೆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ" ಎಂದು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.