ಚಂಡೀಗಢ, ಫೆ 26(DaijiworldNews/SK): ಭಾರತೀಯ ರಾಷ್ಟ್ರೀಯ ಲೋಕದಳದ ಹರಿಯಾಣ ಘಟಕದ ಅಧ್ಯಕ್ಷ ನಫ್ ಸಿಂಗ್ ರಾಥೀ ಅವರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆಗೈದ ಘಟನೆ ಜಜ್ಜರ್ನ ಬಹದ್ದೂರ್ಗಢ ಪಟ್ಟಣ ನಡೆದಿದೆ.
ಮಾಜಿ ಶಾಸಕ ರಾಥೀ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಬರೊಬ್ಬರಿ 40 ರಿಂದ 50 ಸುತ್ತಿನ ದಾಳಿ ನಡೆಸಿದ್ದಾರೆ. ದಾಳಿಯ ಪರಿಣಾಮ ಶಾಸಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ದಾಳಿಯಲ್ಲಿ ಪಕ್ಷದ ಕಾರ್ಯಕರ್ತ ಜೈಕಿಶನ್ ಅನ್ನೋರು ಕೂಡ ಸಾವಿಗೀಡಗಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನು ಪೊಲೀಸ್ ಅಧಿಕಾರಿ ಅರ್ಪಿತ್ ಜೈನ್ ನೀಡಿರುವ ಮಾಹಿತಿ ಪ್ರಕಾರ, ಸೆಂಟ್ರಲ್ ಇಂಟೆಲಿಜೆನ್ಸ್ ಏಜನ್ಸಿ ಮತ್ತು ಎಸ್ ಟಿ ಎಫ್ ತಂಡಗಳು ಹತ್ಯೆ ಪ್ರಕರಣದ ತನಿಖೆ ಆರಂಭಿಸಿದ್ದಾರೆ. ಶೀಘ್ರದಲ್ಲಿ ಆರೋಪಿಗಳ ಬಂಧನ ಆಗಲಿದೆ ಎಂದು ತಿಳಿಸಿದ್ದಾರೆ.
ಇನ್ನು ಘಟನೆಯಲ್ಲಿ ಗಾಯಗೊಂಡಿರುವ ನಾಲ್ವರು ಭದ್ರತಾ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರಲ್ಲಿ ಇಬ್ಬರು ತೀವ್ರ ರಕ್ತಸ್ರಾವ ಉಂಟಾದ ಹಿನ್ನೆಲೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ವೈದ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.