ಹುಬ್ಬಳ್ಳಿ, ಫೆ 26(DajiworldNews/SK): ಮುಂದೆ ಕಾಂಗ್ರೆಸ್ ಎಂದಿಗೂ ಅಧಿಕಾರ ಚುಕ್ಕಾಣಿ ಹಿಡಿಯಲು ಸಾಧ್ಯವಿಲ್ಲ. ಇದೇ ಕಾಂಗ್ರೆಸ್ ನ ಕೊನೆಯ ಸರ್ಕಾರವಾಗಲಿದ್ದು, ಸಿದ್ದರಾಮಯ್ಯ ನವರ ಅಧಿಕಾರಿ ಅಂತ್ಯಕೊಗೊಳ್ಳುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದ್ದಾರೆ.
ಮುಂದಿನ 9 ವರ್ಷಗಳ ಕಾಲ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಅಧಿಕಾರದಲ್ಲಿ ಇರುತ್ತದೆ ಎಂಬ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ ಜಗದೀಶ್ ಶೆಟ್ಟರ್ ಅವರು, ಡಿಕೆಶಿಯವರು ಕನಸುಕಾಣುತ್ತಿದ್ದಾರೆ. ಯಾರು ಬೇಕಾದರೂ ಬಂದು ಕಾಂಗ್ರೆಸ್ಗೆ ಸೇರ್ಪಡೆಯಾಗಬಹುದು ಎಂದು ಡಿಕೆಶಿ ಅವರು ಹೇಳುತ್ತಿದ್ದಾರೆ ಎಂದರು.
ಇನ್ನು ಆ ಕಾಂಗ್ರೆಸ್ ಪಕ್ಷಕ್ಕೆ ಹೋಗುವವರು ಯಾರಿದ್ದಾರೆ? ಬಹುತೇಕ ಮೂಲ ಕಾಂಗ್ರೆಸ್ಸಿಗರೇ ರಾಜೀನಾಮೆ ನೀಡಿ, ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬೇರೆ, ಬೇರೆ ರಾಜ್ಯಗಳಲ್ಲೂ ಇದೇ ಸ್ಥಿತಿ ನಿರ್ಮಾಣವಾಗಿದ್ದು ಕಾಂಗ್ರೆಸ್ಗೆ ಹೋಗುವವರು ಯಾರು ಇಲ್ಲ ಎಂದು ಹೇಳಿದ್ದಾರೆ.