ರಾಯಚೂರು, ಎ28(Daijiworld News/SS): ಎಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾರಂಭಿಕ ಹಂತದ ತನಿಖೆಯಲ್ಲಿ ಪೊಲೀಸರಿಂದ ಆಗಿರುವ ಲೋಪದ ಬಗ್ಗೆಯೂ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚಿಸಲಾಗಿದೆ ಎಂದು ಎಡಿಜಿಪಿ ಎಂ.ಎ.ಸಲೀಂ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಕರಣದ ತನಿಖೆಯಲ್ಲಿ ಲೋಪ ಕಂಡು ಬಂದ ಹಿನ್ನೆಲೆಯಲ್ಲಿ ಪಿಎಸ್ಐ ಹಾಗೂ ಕಾನ್ಸ್ಟೆಬಲ್ ಒಬ್ಬರನ್ನು ಈಗಾಗಲೇ ಅಮಾನತು ಮಾಡಲಾಗಿದೆ. ಮಾತ್ರವಲ್ಲ ಪ್ರಾರಂಭಿಕ ಹಂತದ ತನಿಖೆಯಲ್ಲಿ ಪೊಲೀಸರಿಂದ ಆಗಿರುವ ಲೋಪದ ಬಗ್ಗೆಯೂ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚಿಸಲಾಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಆರೋಪಿ ಸುದರ್ಶನ ಯಾದವ್ ಸಿಐಡಿ ಕಸ್ಟಡಿಯ ಅವಧಿಯನ್ನು ಇಲ್ಲಿನ ನ್ಯಾಯಾಲಯ ಮೇ 2ರವರೆಗೆ ವಿಸ್ತರಣೆ ಮಾಡಿದೆ.
ಮಧು ಪತ್ತಾರ್ ಏಪ್ರಿಲ್ 13 ರಂದು ಪರೀಕ್ಷೆ ಬರೆಯಲು ಕಾಲೇಜಿಗೆ ಹೋದವರು ಏಪ್ರಿಲ್ 14 ರಂದು ಶವವಾಗಿ ಪತ್ತೆಯಾಗಿದ್ದಳು. ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ಪ್ರಕರಣದ ಹಿನ್ನೆಲೆ ನ್ಯಾಯಕ್ಕಾಗಿ ರಾಯಚೂರಿನಲ್ಲಿ ಹೋರಾಟಗಳು ನಿರಂತರವಾಗಿ ನಡೆದಿವೆ.