ಇಟಾನಗರ, ಫೆ 26 (DaijiworldNews/HR): ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಅರುಣಾಚಲ ಪ್ರದೇಶದ ಕಾಂಗ್ರೆಸ್ ಪಕ್ಷದ ಶಾಸಕರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ನಾಲ್ವರು ಶಾಸಕರು ಮುಖ್ಯಮಂತ್ರಿ ಪೆಮಾಖಂಡು ಅವರ ಸಮ್ಮುಖದಲ್ಲಿ ಇಟಾನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ವಿರೋಧ ಪಕ್ಷದ ಕಾಂಗ್ರೆಸ್ ಶಾಸಕರಾದ ನಿನೋಂಗ್ ಎರಿಂಗ್ ಮತ್ತು ವಾಂಗ್ಲಿಂಗ್ ಲೋವಾಂಗ್ಡಾಂಗ್ ಮತ್ತು ಎನ್ಪಿಪಿ ಶಾಸಕರಾದ ಮುಚ್ಚು ಮಿಥಿ ಮತ್ತು ಗೋಕರ್ ಬಸಾರ್ ಅವರು ಬಿಜೆಪಿಗೆ ಸೇರ್ಪಡೆಗೊಂಡರು.
ಇನ್ನು ಈ ಸಮಾರಂಭದಲ್ಲಿ ಅಸ್ಸಾಂ ಸಚಿವರು ಮತ್ತು ಅರುಣಾಚಲ ಪ್ರದೇಶದ ಬಿಜೆಪಿಯ ಚುನಾವಣಾ ಉಸ್ತುವಾರಿ ಅಶೋಕ್ ಸಿಂಘಾಲ್ ಮತ್ತು ರಾಜ್ಯಾಧ್ಯಕ್ಷ ಬಿಯುರಾಮ್ ವಾಹ್ಗೆ ಉಪಸ್ಥಿತರಿದ್ದರು.