ನವದೆಹಲಿ, ಫೆ 26(DajiworldNews/AK): 2024ರ ಲೋಕ ಸಭಾ ಚುನಾವಣೆ ಪ್ರಚಾರ ರಂಗೇರುತ್ತಿದೆ. ಇತ್ತ ಪ್ರಣಾಳಿಕೆ ಸಿದ್ಧಪಡಿಸಲು ಸಾರ್ವಜನಿಕರಿಂದ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಸಲಹೆಗಳನ್ನುಆಹ್ವಾನಿಸಿದ್ದಾರೆ.
ಪಕ್ಷದ ಪ್ರಣಾಳಿಕೆ ರಚಿಸಲು ಸಲಹೆ ಪಡೆಯಲು ಬಿಜೆಪಿ ದೇಶದಾದ್ಯಂತ ಅಭಿಯಾನ ಆರಂಭಿಸಿದ್ದು, ದೆಹಲಿಯ ಪಕ್ಷದ ಪ್ರಧಾನ ಕಚೇ ರಿಯಿಂದ ಅಭಿಯಾನದಲ್ಲಿ ತೊಡಗಿಗೊಳ್ಳುವ ವಾಹನಗಳಿಗೆ ಅದಕ್ಕೆ ನಡ್ಡಾ ಇಂದು ಚಾಲನೆ ನೀಡಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಕೆಲಸ ಮತ್ತು ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ಅವರ ದೂರದೃಷ್ಟಿಯನ್ನು ಎತ್ತಿ ತೋರಿಸುವುದು ಈ ಅಭಿಯಾನದ ಉದ್ದೇಶವಾಗಿದೆ.
ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತವನ್ನು ಅಭಿವೃದ್ಧಿ ಹೊಂದಿದ ದೇ ಶವನ್ನಾಗಿ ಮಾಡಲು 'ಅಮೃತ ಕಾಲ'ದಲ್ಲಿ ಕೆಲಸ ಮಾಡಲಾಗುತ್ತಿದೆ.
2024ರ ಲೋಕಸಭೆ ಚುನಾವಣೆಗೆ ಪಕ್ಷದ ಪ್ರಣಾಳಿಕೆ ಸಿದ್ಧಪಡಿಸುವ ಕೆಲಸ ನಡೆಯುತ್ತಿದ್ದು, ಅದಕ್ಕಾಗಿ ಜನರಿಂದ ಸಲಹೆಗಳನ್ನು ಆಹ್ವಾನಿಸಲಾಗಿದೆ ಎಂದರು.