ಚಿಕ್ಕಮಗಳೂರು, ಫೆ 27(DaijiworldNews/AK): ವ್ಯಭಿಚಾರದ ರಾಜಕಾರಣಕ್ಕೆ ಯಾರೂ ಮಣೆ ಹಾಕಬಾರದು. ಪಕ್ಷದೊಳಗಿದ್ದು ರಾಜಕೀಯ ವ್ಯಭಿಚಾರ ಮಾಡೋದು ಶೂನ್ಯ ಸಹನೆ ಎಂದು ಮಾಜಿ ಶಾಸಕ ಸಿ.ಟಿ.ರವಿ ಎಸ್.ಟಿ ಸೋಮಶೇಖರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯಸಭೆ ಚುನಾವಣೆಯಲ್ಲಿ ಎಸ್.ಟಿ.ಸೋಮಶೇಖರ್ ಅಡ್ಡ ಮತದಾನದ ಕುರಿತು ಪ್ರತಿಕ್ರಿಯಿಸಿದ ಅವರು, ವ್ಯಕ್ತಿ ಸಂಬಂಧಕ್ಕೋಸ್ಕರ ರಾಜೀ ರಾಜಕಾರಣ ಒಳ್ಳೆಯದಲ್ಲ. ಅವಕಾಶವಾದಿಗಳಿಗೆ ಸಪೋರ್ಟ್ ಮಾಡೋದು ಅನೈತಿಕ ರಾಜಕಾರಣಕ್ಕೆ ವೇದಿಕೆ ಸೃಷ್ಠಿಸಿದಂತೆ ಎಂದರು
ಹಾರ್ಡ್ ಕೋರ್, ಸಿದ್ಧಾಂತಕ್ಕೆ ರಾಜಕಾರಣ ಮಾಡೋರು ನಿಷ್ಠೂರಕ್ಕೆ ಒಳಗಾಗುತ್ತಾರೆ. ಇಂಥವರು ನಮ್ಮ ಪಕ್ಷದ ಸಿಎಂ, ಬೇರೆ ಪಕ್ಷದ ಸಿಎಂ ಬಳಿಯೂ ಚೆನ್ನಾಗಿರುತ್ತಾರೆ. ರಾಜಕಾರಣದ ವ್ಯಭಿಚಾರ ಮಾಡೋರು ಎಲ್ಲಾ ಕಡೆ ಕಡೆ ಹೋಗಿ ಸುಲಭವಾಗಿ ಸೆಟ್ ಆಗುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಅಭ್ಯರ್ಥಿ ಜಿ.ಸಿ.ಚಂದ್ರಶೇಖರ್ ಪರ ಮತ ಚಯಾಯಿಸಿದ ಎಸ್ಟಿ ಸೋಮಶೇಖರ್ ವಿರುದ್ಧ ಕ್ರಮ ಕೈಗೊಳ್ಳಲು ಬಿಜೆಪಿ ನಾಯಕರು ಮುಂದಾಗಿದ್ದಾರೆ.