ಶಿಮ್ಲಾ, ಫೆ 28 (DaijiworldNews/HR): ಕಾಂಗ್ರೆಸ್ ಶಾಸಕ ವಿಕ್ರಮಾದಿತ್ಯ ಸಿಂಗ್ ಅವರು ರಾಜ್ಯಸಭೆ ಚುನಾವಣೆ ಫಲಿತಾಂಶದ ಬಳಿಕ ಬುಧವಾರ ಬೆಳಗ್ಗೆ ಸಚಿವ ಸಂಪುಟ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಸುಖವಿಂದರ್ ಸಿಂಗ್ ಸುಖು ಸರ್ಕಾರವು ತನ್ನ ಸ್ವಂತ ಶಾಸಕರನ್ನು ಹಲವಾರು ಬಾರಿ ಅವಮಾನಿಸಿದೆ ಎಂದು ವಿಕ್ರಮಾದಿತ್ಯ ಸಿಂಗ್ ಆರೋಪಿಸಿದ್ದಾರೆ ಎಂದು ವರದಿಯಾಗಿದೆ.
ಇನ್ನು ಅವಮಾನವನ್ನು ಸಹಿಸಲಾಗುವುದಿಲ್ಲ. ಈಗ ಹಿಮಾಚಲದಲ್ಲಿ ಕಾಂಗ್ರೆಸ್ ಮುಂದಿನ ನಡೆ ಕುರಿತು ಪಕ್ಷದ ಹೈಕಮಾಂಡ್ ನಿರ್ಧರಿಸಬೇಕು ಎಂದು ಹೇಳಿದ್ದಾರೆ.