ಬೆಂಗಳೂರು, ಫೆ 29(DaijiworldNews/MS): ಮಾಜಿ ಎಐಎಸ್ ಅಧಿಕಾರಿ, ಬಿಜೆಪಿ ಮುಖಂಡ, ಹಿರಿಯ ನಟ ಕೆ. ಶಿವರಾಂ (71) ಅವರು HCG ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಕೆ ಶಿವರಾಮ್ ಅವರಿಗೆ 20 ದಿನಗಳ ಹಿಂದೆ ರಕ್ತದೊತ್ತಡದಲ್ಲಿ ಏರುಪೇರು ಉಂಟಾಗಿತ್ತು. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೆ ಶಿವರಾಂ ಅವರಿಗೆ ಡಯಾಲಿಸಿಸ್ ಕೂಡ ಮಾಡಲಾಗುತ್ತಿತ್ತು. ಫೆ.28 ರಂದು ಅವರಿಗೆ ಹೃದಯಾಘಾತ ಸಂಭಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬಾ ನಲ್ಲೆ ಮಧುಚಂದ್ರಕೆʼ ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ಭರವಸೆ ಮೂಡಿಸಿದ್ದ ಕೆ ಶಿವರಾಮ್ ವೃತ್ತಿಯಲ್ಲಿ ಐಎಎಸ್ ಅಧಿಕಾರಿಯಾಗಿದ್ದರು. ನಂತರ ʻವಸಂತ ಕಾವ್ಯʼ , ʻಸಾಂಗ್ಲಿಯಾನ 3ʼ ಖಳ ನಾಯಕ ಮುಂತಾದ ಚಿತ್ರಗಳಲ್ಲಿ ನಟಿಸಿದರು. ಕನ್ನಡದಲ್ಲಿಯೇ ಐಎಎಸ್ ಪರೀಕ್ಷೆ ಬರೆದು ಉತ್ತೀರ್ಣರಾದ ಮೊದಲ ಕನ್ನಡಿಗರು ಶಿವರಾಮ್. ಸುದೀರ್ಘ ಐಎಎಸ್ ವೃತ್ತಿಜೀವನದಲ್ಲಿ ಬಿಜಾಪುರ, ಬೆಂಗಳೂರು, ಮೈಸೂರು, ಕೊಪ್ಪಳ, ದಾವಣಗೆರೆ ಜಿಲ್ಲೆಗಳಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.