ಬೆಂಗಳೂರು, ಫೆ 29 (DaijiworldNews/HR): ಅಧಿಕಾರದಲ್ಲಿ ನಮ್ಮ ಬಿಜೆಪಿ ಸರ್ಕಾರ ಇದ್ದಿದ್ರೆ ಪಾಕಿಸ್ತಾನ ಪರ ಘೋಷಣೆ ಕೂಗಿದವರನ್ನ ಅಲ್ಲಿಯೇ ಗುಂಡಿಟ್ಟು ಸಾಯಿಸುತ್ತಿತ್ತು ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸೌಧದಲ್ಲಿ ಎಮರ್ಜೆನ್ಸಿ ತಂದಿದ್ದಾರೆ. ವಿಪಕ್ಷಗಳು ದೇಶದ್ರೋಗಿಗಳ ಬಂಧನ ಮಾಡಿ ಅಂತ ಧರಣಿ ಮಾಡುತ್ತಿವೆ. ಆದರೆ ಸರ್ಕಾರ ಇದುವರೆಗೂ ಯಾರನ್ನ ಬಂಧನ ಮಾಡಿಲ್ಲ ಎಂದು ವಾಗ್ದಾಳಿ ನಡೆಸಿದರು.
ಇನ್ನು ಪಾಕ್ ಭಯೋತ್ಪಾದಕರ ಗುಂಡಿಗೆ ನಮ್ಮ ಸೈನಿಕರು ಬಲಿಯಾಗ್ತಿದ್ದು, ನಮ್ಮ ಸರ್ಕಾರ ಇದ್ದಿದ್ರೆ ಪಾಕ್ ಪರ ಘೋಷಣೆ ಕೂಗಿದವರನ್ನ ಅಲ್ಲೇ ಗುಂಡಿಟ್ಟು ಸಾಯಿಸ್ತಿತ್ತು. ಇವರು ಬಂಧನ ಕೂಡಾ ಮಾಡದೇ ರಕ್ಷಣೆ ಮಾಡ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.