ಬೆಂಗಳೂರು, ಫೆ 29 (DaijiworldNews/HR): ತೀವ್ರ ವಿರೋಧದ ನಡುವೆಯೂ ಜಾತಿ ಗಣತಿ ವರದಿ ಸಲ್ಲಿಕೆಯಾಗಿದ್ದು, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ಅವರು ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಸಿಎಂ, ಜಾತಿ ಗಣತಿ ವರದಿ ಸ್ವೀಕರಿಸಿದ್ದೇನೆ. ಜಾತಿ ಗಣತಿ ವರದಿಯಲ್ಲಿ ಏನಿದೆ ಎಂದು ನಾನು ನೋಡಿಲ್ಲ. ಕ್ಯಾಬಿನೆಟ್ನಲ್ಲಿ ಜಾತಿಗಣತಿ ವರದಿ ಚರ್ಚೆ ಮಾಡುತ್ತೇವೆ ಎಂದರು.
ಜಯಪ್ರಕಾಶ್ ಹೆಗ್ಡೆ ಮಾತನಾಡಿ, ಕಾಂತರಾಜು ಸಮಿತಿ 2014-15ರಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ದತ್ತಾಂಶ ಸಂಗ್ರಹ ಮಾಡಿತ್ತು. ಕಾಂತರಾಜು ಸಮಿತಿ ದತ್ತಾಂಶ ಪ್ರಕಾರ ನಾವು ವರದಿ ಸಿದ್ಧಪಡಿಸಿದ್ದೇವೆ. ಜಾತಿಗಣತಿ ವರದಿಗೆ ಕಾರ್ಯದರ್ಶಿ, ಎಲ್ಲಾ ಸದಸ್ಯರು ಸಹಿಯೂ ಇದೆ. ವರದಿ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ಆಗಲಿದೆ ಎಂದು ತಿಳಿಸಿದ್ದಾರೆ.