ಬೆಂಗಳೂರು, ಫೆ 29 (DaijiworldNews/HR): ವಿಧಾನಸೌಧಲ್ಲಿ ಪಾಕ್ ಪರ ಘೋಷಣೆ ಕೂಗಿದ ಆರೋಪಕ್ಕೆ ಸಂಬಂಧಿಸಿದಂತೆ ಧ್ವನಿ ಪರೀಕ್ಷೆ ಮಾಡಿದ ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್ಎಸ್ಎಲ್) ತನ್ನ ವರದಿಯನ್ನು ಗೃಹ ಸಚಿವಾಲಯಕ್ಕೆ ನೀಡಿದೆ ಎಂದು ವರದಿಯಾಗಿದೆ.
ಇಂದು ಸಂಜೆ ಎಫ್ಎಸ್ಎಲ್ ವರದಿ ಸರ್ಕಾರಕ್ಕೆ ಸಲ್ಲಿಕೆ ಮಾಡಿದ್ದು, ಯಾವುದೇ ಕ್ಷಣದಲ್ಲಿ ವರದಿ ಮಾಹಿತಿ ಪ್ರಕಟವಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಇನ್ನು ಘೋಷಣೆ ಕೂಗಿರುವ ಆರೋಪ ಎದುರಿಸುತ್ತಿರುವ ಹಾವೇರಿಯ ಬ್ಯಾಡಗಿ ಮೆಣಸಿನಕಾಯಿ ವರ್ತಕ ಮಹಮದ್ ಶಫಿ ನಾಶಿಪುಡಿಯನ್ನು ಧ್ವನಿ ಪರೀಕ್ಷೆಗಾಗಿ ಬೆಂಗಳೂರು ಪೊಲೀಸರು ತಡರಾತ್ರಿ ವಿಚಾರಣೆ ನಡೆಸಿದ್ದಾರೆ.