ಬೆಳಗಾವಿ, ಮಾ 03(DaijiworldNews/AK): ವಿಜಯಪುರದ ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಅನಾರೋಗ್ಯದ ಹಿನ್ನಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಿದುಳಿನ ರಕ್ತಸ್ರಾವದ ಹಿನ್ನೆಲೆಯಲ್ಲಿ ಬೆಳಗಾವಿ ಕೆಎಲ್ಇ ಆಸ್ಪತ್ರೆಗೆ ಮಾಜಿ ಕೇಂದ್ರ ಸಚಿವ ದಾಖಲಾಗಿದ್ದಾರೆ.ಜಿಗಜಿಣಗಿ ಆರೋಗ್ಯ ಚಿಂತಾಜನಕವಾಗಿದ್ದು, ವೈದ್ಯರು ತೀವ್ರ ನಿಗಾಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.