ಹಾಸನ, ಮಾ 05(DaijiworlNews/AK):ಲೋಕಸಭೆ ಚುನಾವಣೆ ಬಳಿಕ ಮುಖ್ಯಮಂತ್ರಿ ಬದಲಾವಣೆ ವಿಚಾರ ಕೇವಲ ಊಹಾಪೋಹ. ಆ ರೀತಿ ಏನೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ತಿಳಿಸಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಸ್ಥಿರ ಸರ್ಕಾರ ಕೊಡಬೇಕಿರುವುದು ಎಲ್ಲ ಪಕ್ಷಗಳ ಜವಾಬ್ದಾರಿ. ಹಾಗಾಗಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಐದು ವರ್ಷ ಪೂರೈಸುತ್ತಾರೆಂಬುದು ನನ್ನ ನಂಬಿಕೆ ಎಂದರು.
ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆ’ ಎಂಬ ಕೆಲ ಶಾಸಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಪ್ರತಿ ಸರ್ಕಾರವಿದ್ದಾಗಲೂ ಇಂಥ ಮಾತುಗಳು ಬರುತ್ತವೆ. ಬಿಜೆಪಿ ಸರ್ಕಾರವಿದ್ದಾಗ ಎಷ್ಟು ಮಂದಿ ಮುಖ್ಯಮಂತ್ರಿ ಆಕಾಂಕ್ಷಿಗಳಿದ್ದರು? ಅವರ ಬೆಂಬಲಿಗರು ಕೂಡ ಮಾತನಾಡಿದ್ದರು ಎಂದು ಸಮರ್ಥಿಸಿಕೊಂಡರು.
ಜಾತಿ ಗಣತಿಯನ್ನು ಬಿಡುಗಡೆ ಮಾಡುತ್ತೇವೆ, ಇದು ನಮ್ಮ ಸರ್ಕಾರದ ನಿಲುವು. ಜಾತಿಗಣತಿ ಮಾಡುವುದರಿಂದ ಹಲವಾರು ಅನುಕೂಲಗಳಿವೆ ಎಂದು ಸರ್ಕಾರ ಸಮೀಕ್ಷೆ ಮಾಡಿಸಿದೆ ಎಂದರು.