ನವದೆಹಲಿ, ಮಾ 05(DaijiworlNews/AA): ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ) ದಾಖಲಿಸಿದ್ದ ಪ್ರಕರಣವನ್ನು ಇಂದು ಸುಪ್ರೀಂ ಕೋರ್ಟ್ ರದ್ದುಗೊಳಿಸಿ ಆದೇಶ ಹೊರಡಿಸಿದೆ.
ಡಿಕೆ ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯವು 120ಬಿ ಅಡಿ ಪ್ರಕರಣವನ್ನ ದಾಖಲಿಸಿತ್ತು. ಇಡಿ ದಾಖಲಿಸಿದ್ದ ಈ ಪ್ರಕರಣವನ್ನು ಇದೀಗ ಸುಪ್ರೀಂ ರದ್ದುಗೊಳಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಸರ್ವೋಚ್ಚ ನ್ಯಾಯಾಲಯ ರದ್ದುಗೊಳಿಸಿದೆ. ಈ ಮೂಲಕ ಡಿಕೆಶಿ ಅವರಿಗೆ ಇಡಿ ತನಿಖೆಯಿಂದ ಬಿಗ್ ರಿಲೀಫ್ ದೊರೆತಂತಾಗಿದೆ.
ಇನ್ನು ಡಿಕೆ ಶಿವಕುಮಾರ್ ವಿರುದ್ಧದ ಪ್ರಕರಣದ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠ ನಡೆಸಿದೆ. ವಿಚಾರಣೆ ನಡೆಸಿದ ಪೀಠವು ಈ ಪ್ರಕರಣ ಕ್ರಿಮಿನಲ್ ಪಿತೂರಿಯ ಭಾಗವಾಗಿಲ್ಲ. ಆದ್ದರಿಂದ ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ಬರುವುದಿಲ್ಲ. ಹೈಕೋರ್ಟ್ ಆದೇಶವನ್ನು ರದ್ದು ಮಾಡಲಾಗಿದೆ. ಅಕ್ರಮ ಹಣ ವರ್ಗಾವಣೆ ಕಾಯ್ದೆಯ ಪ್ರಕ್ರಿಯೆ ರದ್ದುಗೊಳಿಸಲಾಗಿದೆ ಎಂದು ಆದೇಶ ನೀಡಿದೆ.