ಕೋಲ್ಕತಾ, ಮಾ 05(DaijiworlNews/AK): ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಅವರು ಕಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಅವರು ರಾಜೀನಾಮೆ ನೀಡಿದ ಕೆಲವೇ ಗಂಟೆಗಳಲ್ಲಿ ಬಿಜೆಪಿ ಸೇರುವುದಾಗಿ ಮಂಗಳವಾರ ಘೋಷಿಸಿದ್ದಾರೆ.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಭಿಜಿತ್ , ಮಾರ್ಚ್ 7ರಂದು ಬಿಜೆಪಿ ಸೇರುವುದಾಗಿ ಹೇಳಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಟಿಎಂಸಿಯ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿರುವ ರಾಷ್ಟ್ರೀಯ ಪಕ್ಷ ಬಿಜೆಪಿಗೆ ನಾನು ಸೇರುತ್ತಿದ್ದೇನೆ ಎಂದು ಹೇಳಿದ್ದಾರೆ.
ಈಗಾಗಲೇ ಅಭಿಜಿತ್ ಗಂಗೋಪಾಧ್ಯಾಯ ತಮ್ಮ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು, ಸಿಜೆಐ ಡಿವೈ ಚಂದ್ರಚೂಡ್ ಮತ್ತು ಕಲ್ಕತ್ತಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಟಿಎಸ್ ಶಿವಜ್ಞಾನಂ ಅವರಿಗೆ ಕಳುಹಿಸಿದ್ದಾರೆ.