ಚೆನ್ನೈ, ಮಾ 06(DaijiworldNews/AK): ಸನಾತನ ಧರ್ಮ ಕುರಿತು ಟೀಕೆ ವಿವಾದಕ್ಕೆ ಸಂಬಂಧಿಸಿದಂತೆ ಡಿಎಂಕೆ ಸಚಿವ ಉದಯನಿಧಿ ಸ್ಟಾಲಿನ್ಗೆ ಈಗ ರಿಲೀಫ್ ದೊರೆತಿದೆ. ಉದಯನಿಧಿ ಸ್ಟಾಲಿನ್ ಮತ್ತು ಇತರ ಇಬ್ಬರು ಡಿಎಂಕೆ ನಾಯಕರು ಶಾಸಕರನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದೆ.
ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಸ್ಟಾಲಿನ್ ಅವರು ಈ ರೀತಿ ಹೇಳಿಕೆಗಳನ್ನು ನೀಡಿರುವುದು ಸರಿಯಲ್ಲ. ಆದರೆ ಇದುವರೆಗೆ ಯಾವುದೇ ನ್ಯಾಯಾಲಯದಿಂದ ಅವರು ಶಿಕ್ಷೆಗೆ ಒಳಗಾಗಿಲ್ಲ ಎಂದು ಸ್ಪಷ್ಟಪಡಿಸಿದೆ. ಈ ಮೂಲಕ ಉದಯನಿಧಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಕಳೆದ ಸೆಪ್ಟೆಂಬರ್ನಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ಪುತ್ರ ಉದಯನಿಧಿ ,ಸನಾತನ ಧರ್ಮದ ಕುರಿತು ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದರು. ಸನಾತನವು ಮಲೇರಿಯಾ ಮತ್ತು ಡೆಂಗ್ಯೂ ಇದ್ದಂತೆ. ಅದನ್ನು ನಿರ್ಮೂಲನೆ ಮಾಡಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಅವರ ಈ ಮಾತುಗಳು ರಾಜಕೀಯದಲ್ಲಿ ಭಾರಿ ಕೋಲಾಹಲವನ್ನೇ ಸೃಷ್ಟಿಸಿತ್ತು.
ಉದಯನಿಧಿ ಸ್ಟಾಲಿನ್ ಜೊತೆಗೆ ರಾಜ್ಯ ಸಚಿವ ಪಿ.ಕೆ.ಸೇಕರ್ ಬಾಬು ಮತ್ತು ಡಿಎಂಕೆ ಸಂಸದ ಎ.ರಾಜಾ ಅವರನ್ನೂ ವಜಾಗೊಳಿಸುವಂತೆ ಅರ್ಜಿದಾರರು ಕೋರ್ಟ್ಗೆ ಮನವಿ ಸಲ್ಲಿಸಿದ್ದರು.