ಗದಗ,ಮಾ 06(DaijiworldNews/SK): ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಇದೀಗ ಈ ವಿಚಾರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ.
ಈ ಬಗ್ಗೆ ಗದಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಅರೆಸ್ಟ್ ಮಾಡಲಾಗಿದೆ, ಇಷ್ಟಕ್ಕೆ ಕೇಸ್ ಮುಗಿಯಲ್ಲ. ಇನ್ನೂ ಅವರ ಧ್ವನಿ ಹೋಲಿಕೆಯ ಬಗ್ಗೆ ಪರಿಶೀಲಿಸಬೇಕು. ಆ ಸಂದರ್ಭದಲ್ಲಿ ಅವರು ಅಲ್ಲಿದ್ರಾ ಅನ್ನೋದನ್ನು ಮೊದಲು ಖಾತರಿ ಪಡಿಸಿಕೊಳ್ಳಬೇಕಾಗಿದೆ ನಂತರ ಮುಂದಿನ ತನಿಖೆಯಾಗುತ್ತದೆ ಎಂದು ಹೇಳಿದ್ದಾರೆ.
ನನಗೆ ಸಿಕ್ಕ ಫೂಟೆಜ್ ಅನ್ನು ಖಾಸಗಿ ಫೋರೆನ್ಸಿಕ್ನಲ್ಲಿ ಪರಿಶೀಲಿಸಿದ್ದೆವು. ನಾನು ಸರ್ಕಾರದ ವರದಿ ಫೈನಲ್ ಅಂತ ಹೇಳಿದ್ದೆ. ಬಿಜೆಪಿಯವರು ಖಾಸಗಿ ವರದಿಯನ್ನು ಸರ್ಕಾರಿ ವರದಿಯಾಗಿ ಬಿಂಬಿಸುವುದು ತಪ್ಪು. ಇನ್ನು ಈಗಲೂ ನಾನು ಅದನ್ನೇ ಹೇಳುತ್ತೇನೆ ಸರ್ಕಾರದ ವರದಿಯನ್ನ ನೋಡಿಯೇ ಇಲ್ಲ ಎಂದು ಜಾರಿಕೊಂಡಿದ್ದಾರೆ.