ಬೆಂಗಳೂರು,ಏ29(DaijiworldNews/AZM): ಏ.29: ನಾಳೆ (ಮಂಗಳವಾರ) ಮಧ್ಯಾಹ್ನ ರಾಜ್ಯಾದ್ಯಂತ ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶ ಪ್ರಕಟವಾಗಲಿದೆ.
ಇದಕ್ಕೂ ಮೊದಲು ಮೇ 2ರಂದು ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ ಎನ್ನಲಾಗಿದ್ದು, ಇದೀಗ ದಿಢೀರ್ ನಿರ್ಧಾರ ಬದಲಿಸಿದ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಮಂಗಳವಾರವೇ ಫಲಿತಾಂಶ ಪ್ರಕಟವಾಗಲಿದೆ ಎಂದು ಮಾಹಿತಿ ನೀಡಿದೆ.
ನಾಳೆ ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಬಳಿಕ ಫಲಿತಾಂಶ ಪ್ರಕಟ ಮಾಡಲಾಗುತ್ತದೆ. ಅನಂತರ ವಿದ್ಯಾರ್ಥಿಗಳು ಪ್ರೌಢಶಿಕ್ಷಣ ಮಂಡಳಿ ವೆಬ್ ಸೈಟ್ನಲ್ಲಿ ಫಲಿತಾಂಶ ನೋಡಬಹುದಾಗಿದೆ. ಫಲಿತಾಂಶವನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ವೆಬ್ ಸೈಟ್ ನಲ್ಲಿ ವೀಕ್ಷಿಸಬಹುದಾಗಿದೆ.
ಕಳೆದ ಬಾರಿಯಂತೆಯೇ ಈ ಬಾರಿಯೂ ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳಿಗೂ ಎಸ್ಎಂಎಸ್ ಮೂಲಕ ಫಲಿತಾಂಶ ಕಳುಹಿಸಲಾಗುತ್ತದೆ. ಅಲ್ಲದೆ, ಫಲಿತಾಂಶವನ್ನು www.karresults.nic.in , www.kaceb.kar.nic.in ವೆಬ್ಸೈಟ್ ನಲ್ಲೂ ನೋಡಬಹುದು. ಮೇ 1 ರಂದು ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರಕಟಿಸಲಾಗುತ್ತದೆ.
www.kaceb.kar.nic.in, www.karresults.nic.in ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಈ ಅಧಿಕೃತ ವೆಬ್ ಸೈಟ್ ಗೆ ಲಾಗ್ ಆನ್ ಮಾಡಿರಿ. ಹೋಂ ಪೇಜ್ ನಲ್ಲಿ ಎಸ್.ಎಸ್.ಎಲ್.ಸಿ. ರಿಸಲ್ಟ್ ಕ್ಲಿಕ್ ಮಾಡಿ. ನಿಮ್ಮ ರಿಜಿಸ್ಟರ್ ನಂಬರ್ ಟೈಪ್ ಮಾಡಿ. ಬಳಿಕ ಎಂಟರ್ ಕೊಡಿ. ನಿಮ್ಮ ಫಲಿತಾಂಶ ಸ್ಕ್ರೀನ್ ಮೇಲೆ ಬರುತ್ತದೆ. ಇನ್ನು ಎಸ್.ಎಂ.ಎಸ್. ಮೂಲಕ ಎಸ್.ಎಸ್.ಎಲ್.ಸಿ. ಫಲಿತಾಂಶ ಪಡೆಯಲು KSEEB10ROLLNUMBER ಎಂದು ಟೈಪ್ ಮಾಡಿ 56263 ಗೆ ಎಸ್ ಎಮ್ ಎಸ್ ಕಳುಹಿಸಿದರೆ ಫಲಿತಾಂಶ ನೋಡಬಹುದಾಗಿದೆ.