ನವದೆಹಲಿ, ಎ30(Daijiworld News/SS): ಚುನಾವಣಾ ಸಭೆಗಳಲ್ಲಿ ನೀತಿ ಸಂಹಿತೆಯನ್ನು ಪದೇ ಪದೇ ಉಲ್ಲಂಘಿಸುತ್ತಿದ್ದಾರೆ ಎಂದು ಆರೋಪಿಸಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ದೂರು ನೀಡಿತ್ತು.
ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ವಿರುದ್ಧ ಸಂಸದೆ ಸುಶ್ಮಿತಾ ದೇವ್ ಸಲ್ಲಿಸಿದ ದೂರನ್ನು ವಿಚಾರಣೆಗೆ ಎತ್ತಿಕೊಳ್ಳಲು ಸುಪ್ರೀಂ ಕೋರ್ಟ್ ಸಮ್ಮತಿಸಿದೆ.
ಮೋದಿ ಮತ್ತು ಶಾ ಅವರು ನೀತಿ ಸಂಹಿತೆ ಉಲ್ಲಂಘಿಸುತ್ತಿರುವ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದರೂ ಆಯೋಗವು ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸುಶ್ಮಿತಾ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಆರೋಪಿಸಿದ್ದಾರೆ.
ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ಪೀಠವು ಮಂಗಳವಾರ ಈ ಅರ್ಜಿಯ ವಿಚಾರಣೆ ನಡೆಸಲಿದೆ.