ಚೆನ್ನೈ, ಮಾ 11 (DajiworldNews/AK): ತೆಲುಗು ನಿರ್ದೇಶಕ ಸೂರ್ಯ ಕಿರಣ್ ನಿಧನರಾಗಿದ್ದಾರೆ. 48 ವಯಸ್ಸಾಗಿದ್ದ ಕಿರಣ್ ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.
ಅವರ ನಿಧನ ತೆಲುಗು ಚಿತ್ರರಂಗಕ್ಕೆ ಶಾಕ್ ಕೊಟ್ಟಿದೆ. ಅವರ ನಿಧನಕ್ಕೆ ಆಪ್ತರು, ಕಲಾವಿದರು, ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.
ಮಾಸ್ಟರ್ ಸುರೇಶ್ ಎಂಬ ಹೆಸರಿನಲ್ಲಿ 200ಕ್ಕೂ ಹೆಚ್ಚು ಸಿನಿಮಾದಲ್ಲಿ ಬಾಲನಟನಾಗಿ ಸೂರ್ಯ ಕಿರಣ್ ನಟಿಸಿದ್ದಾರೆ. ‘ಸತ್ಯಂ’ ಚಿತ್ರದ ಮೂಲಕ ನಿರ್ದೇಶನಕ್ಕೆ ಕಾಲಿಟ್ಟಾಗ ಸೂರ್ಯ ಕಿರಣ್ ಎಂದು ತಮ್ಮ ಹೆಸರನ್ನು ಬದಲಿಸಿಕೊಂಡಿದ್ದಾರೆ.