ನವದೆಹಲಿ,ಮಾ 14(DaijiworldNews/MS): ಭಾರತದ ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
89 ವರ್ಷದ ಪ್ರತಿಭಾ ಪಾಟೀಲ್ ಅವರು ಜ್ವರ ಹಾಗೂ ಎದೆ ಸೋಂಕಿನಿಂದ ಬಳಲುತ್ತಿದ್ದು ಚಿಕಿತ್ಸೆಗಾಗಿ ಬುಧವಾರ ಪುಣೆಯ ಭಾರತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯಅವರ ಆರೋಗ್ಯ ಸ್ಥಿರವಾಗಿದೆ.
ಕಳೆದ ವರ್ಷ ಫೆಬ್ರವರಿಯಲ್ಲಿ ಮಾಜಿ ರಾಷ್ಟ್ರಪತಿ ಪಾಟೀಲ್ ಅವರ ಪತಿ ದೇವಿಸಿಂಗ್ ಶೇಖಾವತ್ ಅವರು ಹೃದಯಾಘಾತದಿಂದ 89 ನೇ ವಯಸ್ಸಿನಲ್ಲಿ ನಿಧನರಾಗಿದ್ದರು. ಪಾಟೀಲ್ ಅವರು 2007 ರಿಂದ 2012 ರವರೆಗೆ ಸೇವೆ ಸಲ್ಲಿಸಿದ ಭಾರತದ ಗೌರವಾನ್ವಿತ ಸ್ಥಾನವನ್ನು ಅಲಂಕರಿಸಿದ ಮೊದಲ ಮಹಿಳೆ ಎಂಬ ಇತಿಹಾಸವನ್ನು ನಿರ್ಮಿಸಿದ್ದರು.