ತುಮಕೂರು, ಏ 30 (Daijiworld News/MSP): 20 ಸಾವಿರ ಲಂಚ ಸ್ವೀಕರಿಸುತ್ತಿದ್ದ ಸಂದರ್ಭ ಸರ್ಕಾರಿ ಅಭಿಯೋಜಕಿಯೊಬ್ಬರು ಎಸಿಬಿ ಬಲೆಗೆ ಬಿದ್ದಿರುವ ಘಟನೆ ಕೋಲಾರದಲ್ಲಿ ಏ.29ರ ಸೋಮವಾರ ನಡೆದಿದೆ. ಎಸಿಬಿ ಬಲೆಗೆ ಬಿದ್ದವರನ್ನು ಸರ್ಕಾರಿ ಅಭಿಯೋಜಕಿ ಪೂರ್ಣಿಮಾ ಜಿ. ಎಂದು ಗುರುತಿಸಲಾಗಿದೆ.
ವಿಶೇಷ ಎಂದರೆ ನ್ಯಾಯಾಲಯ ಆವರಣದಲ್ಲೇ ಭ್ರಷ್ಟಾಚಾರವನ್ನು ಎಸಿಬಿ ಅಧಿಕಾರಿಗಳು ಬಯಲಿಗೆಳೆದಿದ್ದಾರೆ. ತುಮಕೂರು ಜಿಲ್ಲೆ ತಿಪಟೂರು ನ್ಯಾಯಾಲಯ ಆವರಣದಲ್ಲಿ ಕಕ್ಷಿದಾರಿಂದ 20 ಸಾವಿರ ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಪಬ್ಲಿಕ್ ಪ್ರಾಸಿಕ್ಯೂಟರ್ ಎಸಿಬಿಗೆ ಸಿಕ್ಕಿಬಿದ್ದಿದ್ದಾರೆ.
ದೂರುದಾರ ಕೆ ಇ ಬಿ ಇಂಜಿನಿಯರ್ ಗುರುಬಸವಸ್ವಾಮಿ ಎಂಬವರು ಎಸಿಬಿ ಅಧಿಕಾರಿಗಳಿಗೆ ದೂರು ನೀಡಿದ ಹಿನ್ನಲೆಯಲ್ಲಿ ಈ ದಾಳಿ ನಡೆದಿದೆ. 2015 ರಲ್ಲಿ ವಿದ್ಯುತ್ ಕಂಬ ವೃದ್ದೆ ಮೇಲೆ ಬಿದ್ದು ಕಾಲು ತುಂಡಾಗಿದ್ದ ಪ್ರಕರಣ ಸಂಬಂಧಿಸಿ ಪಬ್ಲಿಕ್ ಪ್ರಾಸಿಕ್ಯೂಟರ್ ಪೂರ್ಣಿಮಾ ಜಿ.ವಕಾಲತ್ತು ವಹಿಸಿದ್ದರು. ಆದರೆ ಈ ಪ್ರಕರಣ ಸೋಮವಾರ ನ್ಯಾಯಾಲಯದಲ್ಲಿ ಖುಲಾಸೆಗೊಂಡಿತ್ತು. ಈ ಬಗ್ಗೆ
ಮೇಲ್ಮನವಿ ಸಲ್ಲಿಸದಿರಲು 40000 ಸಾವಿರ ಲಂಚಕ್ಕಾಗಿ ಕೆ ಇ ಬಿ ಇಂಜಿನಿಯರ್ ಗುರುಬಸವಸ್ವಾಮಿ ಅವರ ಬಳಿ ಬೇಡಿಕೆ ಇಟ್ಟಿದ್ದರು. 20 ಸಾವಿರ ಅಕೌಂಟ್ ಮೂಲಕ ಪಡೆದಿದ್ದ ಅವರು ಉಳಿದ ಮೊತ್ತ 20 ಸಾವಿರ ಹಣ ನೇರವಾಗಿ ಪಡೆಯುವಾಗ ಗುರುಬಸವಸ್ವಾಮಿ ನೀಡಿದ ದೂರಿನಂತೆ ಎಸಿಬಿ ಬಲೆಗೆ ಬಿದ್ದಿದ್ದಾರೆ. ಈ ಹಿನ್ನಲೆಯಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಕಚೇರಿಯಲ್ಲೇ ರಾತ್ರಿ 10.30 ರವೆರೆಗೆ ಎಸಿಬಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.