ಬೆಂಗಳೂರು, ಮಾ 15(DaijiworldNews/AA): ಬ್ಯಾಂಕ್ ಗೆ ಸಾಲ ಪಾವತಿಸದೆ ವಂಚಿಸಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆಗೆ ಸಹಕರಿಸುವಂತೆ ಹೈಕೋರ್ಟ್ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿಗೆ ಸೂಚನೆ ನೀಡಿದೆ.
ರಮೇಶ್ ಜಾರಕಿಹೊಳಿ ತಮ್ಮ ವಿರುದ್ಧ ದಾಖಲಾಗಿರುವ ವಂಚನೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನಡೆಸಿದ್ದು, ಈ ವೇಳೆ ಸಿಐಡಿ ನೋಟಿಸ್ ನೀಡಿದರೂ ರಮೇಶ್ ಜಾರಕಿಹೊಳಿ ತನಿಖೆಗೆ ಹಾಜರಾಗಿಲ್ಲ ಎಂದು ಸರ್ಕಾರದ ಪರ ವಕೀಲ ತಿಳಿಸಿದ್ದಾರೆ. ಈ ಹಿನ್ನೆಲೆ ಹೈಕೋರ್ಟ್, ತನಿಖೆಗೆ ಸಹಕರಿಸಬೇಕೆಂದು ಜಾರಕಿಹೊಳಿ ಸೂಚಿಸಿದೆ. ಒಂದು ವೇಳೆ ತನಿಖೆಗೆ ಹಾಜರಾದರೆ ಅವರನ್ನು ಬಂಧಿಸದಂತೆ ಸಿಐಡಿಗೆ ಸೂಚನೆ ನೀಡೀದೆ. ಈ ಮೂಲಕ ರಮೇಶ್ ಜಾರಕಿಹೊಳೆಗೆ ಕೊಂಚ ರಿಲೀಫ್ ಸಿಕ್ಕಿದಂತಾಗಿದೆ.
ಇನ್ನು ರಮೇಶ್ ಜಾರಕಿಹೊಳಿ ಅವರ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಲಿ. ಕಂಪನಿಗಾಗಿ ಬ್ಯಾಂಕೊಂದರಿಂದ 232 ಕೋಟಿ 88 ಲಕ್ಷ ರೂ. ಸಾಲ ಪಡೆದಿದ್ದರು. ಸಾಲ ಪಡೆದ ಬಳಿಕ ಸಾಲವನ್ನು ಮರುಪಾವತಿಸದೆ ಬ್ಯಾಂಕ್ ಗೆ ವಂಚಿಸಿದ್ದಾರೆ ಎಂದು ಬ್ಯಾಂಕ್ ಮ್ಯಾನೇಜರ್ ದೂರು ದಾಖಲಿಸಿದ್ದರು. ಆದರೆ ಮ್ಯಾನೇಜರ್ ನೀಡಿದ ದೂರು ರದ್ದುಗೊಳಿಸುವಂತೆ ರಮೇಶ್ ಜಾರಕಿಹೊಳಿ ಹೈಕೋರ್ಟ್ ಮೊರೆಹೋಗಿದ್ದರು.