ನವದೆಹಲಿ, ಮಾ 15(DaijiworldNews/AA): ಪೌರತ್ವ ತಿದ್ದುಪಡಿ ಕಾಯ್ದೆಯಡಿ ಭಾರತದ ಪೌರತ್ವ ಪಡೆಯಲು ಅರ್ಹರಾದವರು ಅರ್ಜಿ ಸಲ್ಲಿಸಲು ವಿದೇಶಾಂಗ ಸಚಿವಾಲಯ ಮೊಬೈಲ್ ಆ್ಯಪ್ ಒಂದನ್ನು ಬಿಡುಗಡೆ ಮಾಡಿದೆ.
ಈ ಆ್ಯಪ್ ಗೂಗಲ್ ಪ್ಲೇ ಸ್ಟೋರ್ ಅಲ್ಲಿ ಲಭ್ಯವಿದ್ದು, ಗೂಗಲ್ ಪ್ಲೇ ಸ್ಟೋರ್ ಮೂಲಕ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಬಹುದು. ಸಿಎಎ 2019ರ ಅಡಿಯಲ್ಲಿ ಪೌರತ್ವ ಪಡೆಯಲು ಅರ್ಜಿಗಳನ್ನು ಸಲ್ಲಿಸಲು 'CAA-2019' ಈ ಮೊಬೈಲ್ ಆ್ಯಪ್ ಕಾರ್ಯನಿರ್ವಹಿಸುತ್ತಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರರು ಮಾಹಿತಿ ನೀಡಿದ್ದಾರೆ.
ಇನ್ನು ಈ ಹಿಂದೆ ವಿದೇಶಾಂಗ ಸಚಿವಾಲಯ ಅರ್ಜಿ ಸಲ್ಲಿಸಲು ವೆಬ್ ಪೋರ್ಟಲ್ ಅನ್ನು ಪ್ರಾರಂಭ ಮಾಡಿತ್ತು. ಸಿಎಎ ಅಡಿಯಲ್ಲಿ ಯಾವುದೇ ದಾಖಲೆಗಳು ಇಲ್ಲದೆ ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಅಫ್ಘಾನಿಸ್ತಾನದಿಂದ 2014ರ ಡಿ. 31ಕ್ಕೆ ಪೂರ್ವದಲ್ಲಿ ಭಾರತ ಪ್ರವೇಶಿಸಿದ ಮುಸ್ಲಿಮೇತರರಿಗೆ ಭಾರತದ ಪೌರತ್ವವನ್ನು ನೀಡಲಾಗುತ್ತದೆ.